ಮಡಿಕೇರಿ ಸೆ.13 : ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ವಕೀಲರ ಸಂಘ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ‘ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನವು ಸೆ.15 ರಂದು ಮಧ್ಯಾಹ್ನ 12 ಗಂಟೆಗೆ ವಿರಾಜಪೇಟೆಯ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಕೆ.ಬಿ. ಪ್ರಸಾದ್, ಸಂತ ಅನ್ನಮ್ಮ ಶಾಲೆಯ ವ್ಯವಸ್ಥಾಪಕರು ರೆ.ಫಾ.ಐಸಾಕ್ ರತ್ನಾಕರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಸತೀಶ್ ಕುಮಾರ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ.ಆನಂದ್ ಎನ್, ತಾ.ಪಂ.ಇಒ ಕೆ.ಸಿ ಅಪ್ಪಣ್ಣ, ಪೊಲೀಸ್ ಉಪಾಧ್ಯಕ್ಷರಾದ ಮೋಹನ್ ಕುಮಾರ್ ಆರ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ಪದವಿ ಪೂರ್ವ ಶಿಕ್ಷಣ ಇಲಾಖೆ ಕೊಡಗು ಜಿಲ್ಲೆ ಉಪ ನಿರ್ದೇಶಕರು ಪುಟ್ಟರಾಜ ಸಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲ, ಮಡಿಕೇರಿ ವಕೀಲರ ಸಂಘದ ಅಧ್ಯಕ್ಷರಾದ ನಿರಂಜನ, ತಾಲೂಕು ವೈದ್ಯಾಧಿಕಾರಿ ಡಾ.ಯತಿರಾಜು, ಜಿಲ್ಲಾ ಮಾನಸಿಕ ಆರೋಗ್ಯ ಮನೋವೈದ್ಯರಾದ ಡೇವಿಡ್ ಲಿನೇಕರ್ ಕರ್ಕಡ ಇತರರು ಪಾಲ್ಗೊಳ್ಳಲಿದ್ದಾರೆ.









