ಮಡಿಕೇರಿ ಸೆ.13 : ಕೊಡಗು ಜಿಲ್ಲಾ ವಿಷ್ಣು ಸೇನಾ ಸಮಿತಿ ವತಿಯಿಂದ ಸೆ.17 ರಂದು ಕನ್ನಡದ ಹಿರಿಯ ನಟ ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ ಜನ್ಮದಿನವನ್ನು ಆಚರಿಸಲಾಗುವುದೆಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್.ನಾಗರಾಜ್ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಂದು ಅಪರಾಹ್ನ 3 ಗಂಟೆಗೆ ನಗರದ ಬಾಲಭವನದಲ್ಲಿ ಕೊಡಗು ವಿಷ್ಣು ಸೇನಾ ಸಮಿತಿ ಅಧ್ಯಕ್ಷ ಎಂ.ಹೆಚ್.ರಫೀಕ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದ್ದಾರೆ.
ಮುಖ್ಯ ಅತಿಥಿಗಳಾಗಿ ಬ್ರಹ್ಮಗಿರಿ ಕೊಡವ ವಾರಪತ್ರಿಕೆಯ ಸಂಪಾದಕ ಯು.ಎಂ.ಪೂವಯ್ಯ, ಸಾಹಿತಿ ಡಾಟಿ ಪೂವಯ್ಯ, ಕಲಾವಿದ ಜೂ.ವಿಷ್ಣುವರ್ಧನ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಕ್ಕೆ ಡಾ.ವಿಷ್ಣುವರ್ಧನ್ ಅವರ ಅಭಿಮಾನಿಗಳು, ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಹಾಜರಾಗುವಂತೆ ನಾಗರಾಜ್ ಮನವಿ ಮಾಡಿದ್ದಾರೆ.









