ಮಡಿಕೇರಿ ಸೆ.14 : ಕೊಡಗು ಜಿಲ್ಲಾ ಕಾಂಗ್ರೆಸ್ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ಅವರನ್ನು ಭೇಟಿ ಮಾಡಲಾಯಿತು.
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ಮತ್ತು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ಧರ್ಮಜ ಉತ್ತಪ್ಪ ಅವರ ನೇತೃತ್ವದಲ್ಲಿ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ಅವರನ್ನು ಭೇಟಿ ಮಾಡಿ ಕೊಡಗು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳನ್ನು ಈ ಹಿಂದಿನಂತೆ 29 ಸ್ಥಾನಕ್ಕೆ ಹೆಚ್ಚಳ ಮಾಡುವಂತೆ ಒತ್ತಾಯಿಸಿ, ಮನವಿಯನ್ನು ಸಲ್ಲಿಸಿದರು.
ಅಭಿವೃದ್ಧಿಯ ವಿಷಯದಲ್ಲಿ ಕೊಡಗು ಜಿಲ್ಲೆಯು ಹಿಂದುಳಿದಿದ್ದು ಸರ್ಕಾರವು ಈ ಎರಡು ವಿಚಾರಗಳಿಗೆ ಸ್ಪಂದಿಸಬೇಕೆಂದು ಒತ್ತಾಯಿಸಿದರು.
ಕೊಡಗು ಜಿಲ್ಲೆಯ ಅಭಿವೃದ್ಧಿಗೆ ವಿಶೇಷ ಅನುಧಾನ ನೀಡಲು ಮತ್ತು ಮಳೆ ಕೊರತೆ ಹಿನ್ನೆಲೆ ಸರ್ಕಾರ ಘೋಷಣೆ ಮಾಡಿರುವ ಬರಪೀಡಿತ ಪ್ರದೇಶಗಳಿಗೆ ಹೆಚ್ಚಿನ ಅನುಧಾನ ನೀಡಬೇಕೆಂದು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಲಾಯಿತು.
ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್ ಬೋಸ್ ರಾಜ್, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಕಾಂಗ್ರೆಸ್ ಮುಖಂಡರಾದ ಟಿ.ಪಿ.ರಮೇಶ್, ಚಂದ್ರಮೌಳಿ, ಚಂದ್ರಕಲಾ, ಯಕೂಬ್, ಕಾಂಗ್ರೆಸ್ ನ ಪದಾಧಿಕಾರಿಗಳು, ಸದಸ್ಯರುಗಳು, ಕೆಪಿಸಿಸಿಯ ಪ್ರಮುಖರು ಮತ್ತು ಸದಸ್ಯರುಗಳು, ಜಿಲ್ಲಾ ಪಂಚಾಯತ್ ನ ಮಾಜಿ ಸದಸ್ಯರುಗಳು ಹಾಗೂ ಬ್ಲಾಕ್ ಕಾಂಗ್ರೆಸ್ ನ ಪದಾಧಿಕಾರಿಗಳು ಹಾಜರಿದ್ದರು.








