ಮಡಿಕೇರಿ ಸೆ.14 : ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 5.76 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 18.03 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1829.16 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 3124.82 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 4.25 ಮಿ.ಮೀ. ಕಳೆದ ವರ್ಷ ಇದೇ ದಿನ 25.55 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2702.73 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 4521.75 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 8.02 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 20.32 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1382.78 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2424.69 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 5 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 8.23 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1401.98 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2428.03 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 2.80, ನಾಪೋಕ್ಲು 2.20, ಸಂಪಾಜೆ 9, ಭಾಗಮಂಡಲ 3, ವಿರಾಜಪೇಟೆ ಕಸಬಾ 1, ಹುದಿಕೇರಿ 13.90, ಶ್ರೀಮಂಗಲ 5.20, ಬಾಳೆಲೆ, 28, ಸೋಮವಾರಪೇಟೆ ಕಸಬಾ 7.80, ಶನಿವಾರಸಂತೆ 5, ಶಾಂತಳ್ಳಿ 13, ಕೊಡ್ಲಿಪೇಟೆ 3.20, ಸುಂಟಿಕೊಪ್ಪ 1 ಮಿ.ಮೀ.ಮಳೆಯಾಗಿದೆ.
ಹಾರಂಗಿ ಜಲಾಶಯದ ನೀರಿನ ಮಟ್ಟ : ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2858.38 ಅಡಿಗಳು. ಕಳೆದ ವರ್ಷ ಇದೇ ದಿನ 2858.02 ಅಡಿಗಳು. ಇಂದಿನ ನೀರಿನ ಒಳಹರಿವು 1302 ಕ್ಯುಸೆಕ್, ಕಳೆದ ವರ್ಷ ಇದೇ ದಿನ 2477 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 433 ಕ್ಯುಸೆಕ್. ನಾಲೆಗೆ 1385 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 750 ಕ್ಯುಸೆಕ್. ನಾಲೆಗೆ 950 ಕ್ಯುಸೆಕ್.