ಮಡಿಕೇರಿ ಸೆ.14 : ಕೊಡಗು ಜಿಲ್ಲಾ ಕಾಂಗ್ರೆಸ್ ವತಿಯಿಂದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಭೇಟಿ ಮಾಡಲಾಯಿತು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಬನ್ನಂಡ ಪೃಥ್ವಿ ಭೇಟಿ ಮಾಡಿ ಕೊಡಗು ಜಿಲ್ಲೆಯ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಕ್ಷೇತ್ರಗಳ ವಿಂಗಡಣೆ ಕುರಿತು ಚರ್ಚಿಸಿದರು.