ಮಡಿಕೇರಿ ಸೆ.15 : ಶ್ರೀ ಭಗಂಡೇಶ್ವರ–ತಲಕಾವೇರಿ ದೇವಾಲಯದಲ್ಲಿ ಪ್ರತೀ ವರ್ಷ ರೂಢಿ ಸಂಪ್ರದಾಯದಂತೆ “ಗಣೇಶ ಚತುರ್ಥಿ” ಹಬ್ಬವನ್ನು ಆಚರಿಸಿಕೊಂಡು ಬರುತ್ತಿರುವ ಹಿನ್ನಲೆಯಲ್ಲಿ ಈ ವರ್ಷವೂ ಸೆ.19 ರಂದು “ಗಣೇಶ ಚತುರ್ಥಿ” ಹಬ್ಬವನ್ನು ನಡೆಸಲಾಗುತ್ತಿದೆ.
ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಸೆ.19 ರಂದು ಬೆಳಗ್ಗೆ 9.30 ಗಂಟೆಗೆ ಗಣಪತಿ ಹೋಮ, ಮಧ್ಯಾಹ್ನ 12 ಗಂಟೆಗೆ ಪೂರ್ಣಾಹುತಿ, ಮಹಾಮಂಗಳಾರತಿ, ಪ್ರಸಾದ ವಿತರಣೆ ಮತ್ತು ಅನ್ನ ಸಂತರ್ಪಣೆ ನಡೆಯಲಿದೆ.
ಶ್ರೀ ತಲಕಾವೇರಿ ದೇವಾಲಯದಲ್ಲಿ ಬೆಳಗ್ಗೆ 9.30 ಗಂಟೆಗೆ ಗಣಪತಿ ಹೋಮ, ಮಧ್ಯಾಹ್ನ 12 ಗಂಟೆಗೆ ಪೂರ್ಣಾಹುತಿ, ಮಹಾಮಂಗಳಾರತಿ ಮತ್ತು ಪ್ರಸಾದ ವಿತರಣೆ ನಡೆಯಲಿದೆ.
ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ದೇವಾಲಯಗಳಲ್ಲಿ ನಡೆಯಲಿರುವ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಆಡಳಿತಾಧಿಕಾರಿಗಳ ಪರವಾಗಿ ಶ್ರೀ ಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯಗಳ ಕಾರ್ಯನಿರ್ವಾಹಕಾಧಿಕಾರಿ ತಿಳಿಸಿದ್ದಾರೆ.







