ಮಡಿಕೇರಿ ಸೆ.15 : ಗೌರಿ ಗಣೇಶೋತ್ಸವದ ಪ್ರಯುಕ್ತ ಪೊನ್ನಂಪೇಟೆ ಸಮೀಪದ ಹಳ್ಳಿಗಟ್ಟು ಶ್ರೀ ಭದ್ರಕಾಳಿ ದೇವಾಲಯದಲ್ಲಿ ಸಾಮೂಹಿಕ ಗಣಪತಿ ಹೋಮ ನಡೆಯಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ಹಾಗೂ ತಕ್ಕಮುಖ್ಯಸ್ಥರು ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ದೇವಾಲಯದ ತಕ್ಕಮುಖ್ಯಸ್ಥರು ಹಾಗೂ ಆಡಳಿತ ಮಂಡಳಿ ಅಧ್ಯಕ್ಷ ಚಮ್ಮಟೀರ ಸುಗುಣ ಮುತ್ತಣ್ಣ, ವರ್ಷಂಪ್ರತಿ ನಡೆಯುವಂತೆ ಈ ಬಾರಿಯೂ ಹಳ್ಳಿಗಟ್ಟು ಶ್ರೀ ಭದ್ರಕಾಳಿ ದೇವಾಲಯದಲ್ಲಿ ಸೆ.19ರಂದು ಚೌತಿ ಪೂಜೆ ನಡೆಯಲಿದ್ದು, ಊರಿನವರು ಮಾತ್ರವಲ್ಲದೆ ಸಾರ್ವಜನಿಕರು ಸಾಮೂಹಿಕ ಗಣಪತಿ ಹೋಮದಲ್ಲಿ ಪಾಲ್ಗೊಂಡು ಪೂಜೆ ಮಾಡಿಸಬಹುದಾಗಿದೆ ಎಂದರು.
ಅಂದು ಬೆಳಿಗ್ಗೆ 7.30 ಗಂಟೆಗೆ ಗಣಪತಿ ಹೋಮ ಆರಂಭವಾಗಲಿದ್ದು, ಪ್ರಸಾದ ವಿನಿಯೋಗದ ಬಳಿಕ ಬೆಳಗಿನ ಉಪಹಾರ ಇರುತ್ತದೆ ಎಂದು ಆಡಳಿತ ಮಂಡಳಿ ತಿಳಿಸಿದೆ. ಪೂಜೆ ಮಾಡಿಸುವವರು ಒಂದು ದಿನ ಮುಂಚಿತವಾಗಿ ಪೂಜಾ ಸಾಮಾಗ್ರಿಗಳನ್ನು ನೀಡುವ ಮೂಲಕ ಪೂಜೆಯ ಬಗ್ಗೆ ಮಾಹಿತಿ ನೀಡಬೇಕಿದೆ. ಹೆಚ್ಚಿನ ಮಾಹಿತಿಗೆ 9845308910 ಅಥವಾ 9483815430 ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.