Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*
  • *21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*
  • *ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*
  • *ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*
  • *ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*
  • *ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*
  • *ಏ.5 ರಿಂದ ಮೇ 2 ರವರೆಗೆ ಚೇನಂಡ ಕಪ್ ಹಾಕಿ ಉತ್ಸವ : 4 ಮೈದಾನಗಳಲ್ಲಿ ಪಂದ್ಯಾವಳಿ : ಹೆಸರು ನೋಂದಣಿಗೆ ಮಾ.20 ಕೊನೆ ದಿನ*
  • *ಏಪ್ರಿಲ್ ನಿಂದಲೇ ಪೂರ್ವಾನ್ವಯವಾಗಲಿದೆ ಹೊಸ ವಿದ್ಯುತ್ ದರ: ಯಾರಿಗೆ ಲಾಭ? ಯಾರಿಗೆ ನಷ್ಟ? ಇಲ್ಲಿದೆ ಕಂಪ್ಲೀಟ್ ಚಾರ್ಟ್*
  • *ನಿಮ್ಮ ಏರಿಯಾದಲ್ಲಿ ನೀರಿಲ್ಲವೇ?: ಕೂಡಲೇ ಈ ಕೆಲಸ ಮಾಡಿ! ಮನೆ ಬಾಗಿಲಿಗೇ ಬರಲಿದೆ ಕಾವೇರಿ ನೀರು; ಹೇಗೆ ಗೊತ್ತಾ?*
  • *ಸೆಟ್ಟೇರಿತು ‘ನನ್ನ ಸೈಕಲ್ ಸವಾರಿ’*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ: ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ: ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ*

ಸೆಪ್ಟೆಂಬರ್ 15, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬೆಂಗಳೂರು ಸೆ.15 :   ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ವಿಧಾನಸೌಧದ ಮುಂಭಾಗ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ ‘ಸಂವಿಧಾನ ಪೀಠಿಕೆ ಓದು’ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.

ನಂತರ ಮಾತನಾಡಿದ ಮುಖ್ಯಮಂತ್ರಿ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಉದಾತ್ತ ಚಿಂತನೆಗಳನ್ನು ಸಾರುವ ನಮ್ಮ ಸಂವಿಧಾನ ನಮ್ಮ ಹೆಮ್ಮೆ. ಸಂವಿಧಾನವನ್ನು ರಚಿಸಿದ ಅಂಬೇಡ್ಕರ್ ಅವರನ್ನು ನೆನಪಿಸಿಕೊಳ್ಳುವ ದಿನವಿದು, ಅವರ ಆಶಯಗಳನ್ನು ಪ್ರತಿಯೊಬ್ಬರು ಅನುಸರಿಸಬೇಕು ಎಂದರು.

ಸಂವಿಧಾನ ವಿರೋಧಿ ಶಕ್ತಿಗಳು ಸಂವಿಧಾನವನ್ನು ನಾಶಗೊಳಿಸಿ ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ ನಡೆಸುತ್ತಿವೆ. ಈ ಬಗ್ಗೆ ಎಚ್ಚರ ಮತ್ತು ಜಾಗೃತಿ ಇರಬೇಕು. ಸಂವಿಧಾನದ ನಾಶ ಮತ್ತು ಮನುಸ್ಮೃತಿಯ ಜಾರಿ ಎಂದರೆ ಶೇ90 ರಷ್ಟು ಭಾರತೀಯರನ್ನು ಮತ್ತೆ ಗುಲಾಮಗಿರಿಗೆ ತಳ್ಳುವುದಾಗಿದೆ. ಇದಕ್ಕಾಗಿ ಬಹಳ ಕುತಂತ್ರಗಳು ನಡೆಯುತ್ತಿವೆ ಎಂದು ಎಚ್ಚರಿಸಿದರು.

We the people of India ಎನ್ನುವ ಮೂಲಕವೇ ನಮ್ಮ ಸಂವಿಧಾನ ತೆರೆದುಕೊಳ್ಳುತ್ತದೆ. ಸಂವಿಧಾನದ ಆಶಯಗಳನ್ನು ಪರಿಣಾಮಕಾರಿಯಾಗಿ ಅರ್ಥೈಸಿಕೊಂಡು ಪಾಲಿಸದಿದ್ದರೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ. ಸಂವಿಧಾನದ ಸಮ ಸಮಾಜ ಮತ್ತು ಜಾತ್ಯತೀತ ತತ್ವದ ಆಶಯಗಳಂತೆಯೇ ನಮ್ಮ ಸರ್ಕಾರ ಸರ್ವರ ಏಳಿಗೆಯ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಜನರ ಹಣವನ್ನು ಮತ್ತೆ ಜನರ ಬದುಕಿಗೇ ಮರಳಿಸುವುದು ನಮ್ಮ ಕಾರ್ಯಕ್ರಮಗಳ ಉದ್ದೇಶವಾಗಿದೆ ಎಂದರು.

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿ, ಅಂಬೇಡ್ಕರ್ ಅವರು ಹಾಕಿಕೊಟ್ಟ ಹಾದಿಯಲ್ಲಿ ನಾವು ನಡೆದಾಗ ಮಾತ್ರ ಸರ್ವರಿಗೂ ಸಮಪಾಲು- ಸಮಬಾಳು ಸಮಾಜವನ್ನು ಕಟ್ಟಲು ಸಾಧ್ಯ. ಸಂವಿಧಾನ ಗಟ್ಟಿ ಇರುವ ಕಾರಣದಿಂದ ಜನರ ಕಲ್ಯಾಣ ಮಾಡುವ ಸರ್ಕಾರಗಳು ಬಂದಿರುವುದು. ನೀವು, ನಾವೆಲ್ಲ ಕೈ ಜೋಡಿಸಿ ಒಟ್ಟಿಗೆ ನಡೆಯೋಣ, ಎಲ್ಲರ ಸಹಕಾರ ಸರ್ಕಾರದ ಜೊತೆ ಇದ್ದರೆ ಅಭಿವೃದ್ಧಿ ಸಾಧ್ಯ ಎಂದು ತಿಳಿಸಿದರು.

ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಗೃಹ ಸಚಿವ ಜಿ.ಪರಮೇಶ್ವರ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಮುನಿಯಪ್ಪ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ವಿಧಾನಪರಿಷತ್ ಸಭಾಪತಿ ಹೊರಟ್ಟಿ ಸೇರಿದಂತೆ 10 ಕ್ಕೂ ಹೆಚ್ಚು ಶಾಸಕರು, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಸೇರಿ ಪೊಲೀಸ್ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

ಈ ಕಾರ್ಯಕ್ರಮಕ್ಕೆ ರಾಜ್ಯ, ದೇಶ, ವಿದೇಶಗಳಿಂದ ನೋಂದಣಿಯಾಗಿದ್ದ ಜನರು ತಾವಿರುವ ಸ್ಥಳದಲ್ಲಿಯೇ ಸಂವಿಧಾನ ಪೀಠಿಕೆ ಓದಿದರು. ಪ್ರತಿ ಜಿಲ್ಲೆಯಲ್ಲೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*

ಮಾರ್ಚ್ 5, 2026

*21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*

ಮಾರ್ಚ್ 5, 2026

*ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*

ಮಾರ್ಚ್ 5, 2026

*21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*

ಮಾರ್ಚ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಮಾ.5 : ಕೊಡಗು ಮುಸ್ಲಿಂ ಸ್ಟೋಟ್ಸ್ ಟ್ರಸ್ಟ್ ವತಿಯಿಂದ 21ನೇ ವರ್ಷದ ಕೊಡಗು ಮುಸ್ಲಿಂ ಕಪ್…

*ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*

ಮಾರ್ಚ್ 5, 2026

*ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*

ಮಾರ್ಚ್ 5, 2026

*ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*

ಮಾರ್ಚ್ 5, 2026

*ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*

ಮಾರ್ಚ್ 5, 2026

*ಏ.5 ರಿಂದ ಮೇ 2 ರವರೆಗೆ ಚೇನಂಡ ಕಪ್ ಹಾಕಿ ಉತ್ಸವ : 4 ಮೈದಾನಗಳಲ್ಲಿ ಪಂದ್ಯಾವಳಿ : ಹೆಸರು ನೋಂದಣಿಗೆ ಮಾ.20 ಕೊನೆ ದಿನ*

ಮಾರ್ಚ್ 5, 2026

*ಏಪ್ರಿಲ್ ನಿಂದಲೇ ಪೂರ್ವಾನ್ವಯವಾಗಲಿದೆ ಹೊಸ ವಿದ್ಯುತ್ ದರ: ಯಾರಿಗೆ ಲಾಭ? ಯಾರಿಗೆ ನಷ್ಟ? ಇಲ್ಲಿದೆ ಕಂಪ್ಲೀಟ್ ಚಾರ್ಟ್*

ಮಾರ್ಚ್ 5, 2026

*ನಿಮ್ಮ ಏರಿಯಾದಲ್ಲಿ ನೀರಿಲ್ಲವೇ?: ಕೂಡಲೇ ಈ ಕೆಲಸ ಮಾಡಿ! ಮನೆ ಬಾಗಿಲಿಗೇ ಬರಲಿದೆ ಕಾವೇರಿ ನೀರು; ಹೇಗೆ ಗೊತ್ತಾ?*

ಮಾರ್ಚ್ 5, 2026

*ಸೆಟ್ಟೇರಿತು ‘ನನ್ನ ಸೈಕಲ್ ಸವಾರಿ’*

ಮಾರ್ಚ್ 5, 2026

*ರಾಜ್ಯ ಬಜೆಟ್ ಕೊಡಗಿನ ಅಭಿವೃದ್ಧಿಗೆ ಪೂರಕವಾಗಿರಲಿ : ಬಿಜೆಪಿ ಒತ್ತಾಯ*

ಮಾರ್ಚ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.