ಮಡಿಕೇರಿ ಸೆ.15 : ಭಾಗಮಂಡಲ ಸಮೀಪದ ಅಯ್ಯಂಗೇರಿ ಗ್ರಾಮದ ಉದಿಯನ ಕಾಳಪ್ಪ ಹಾಗೂ ದಮಯಂತಿ ಅವರ ಪುತ್ರ, ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯು.ಕೆ.ಜಿತನ್ (33) ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ.
ಬೆoಗಳೂರಿನ ಕಮಾಂಡೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಬೆಳಗ್ಗೆ ಮೃತಪಟ್ಟರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಭಾರತೀಯ ಸೇನೆಯಲ್ಲಿ ಕಳೆದ 13 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಜಿತನ್ ಎರಡು ವರ್ಷಗಳ ಹಿಂದೆಯಷ್ಟೇ ವಿವಾಹವಾಗಿದ್ದರು. ಪ್ರಸ್ತುತ ಎಂಇಜಿ ಸೆಂಟರ್ ನಲ್ಲಿ ನಾಯಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸೆ.16 ರಂದು ಅಂತ್ಯಕ್ರಿಯೆ ನಡೆಯಲಿದೆ. ಮೃತರು ಪತ್ನಿ ಹಾಗೂ ತಂದೆ, ತಾಯಿಯನ್ನು ಅಗಲಿದ್ದಾರೆ.










