ಮಡಿಕೇರಿ ಸೆ.15 : ಶೂ ಒಳಗೆ ಸೇರಿಕೊಂಡಿದ್ದ ನಾಗರಹಾವನ್ನು ರಕ್ಷಿಸಿ ಅರಣ್ಯಕ್ಕೆ ಬಿಡುವಲ್ಲಿ ಉರಗ ರಕ್ಷಕ ಸ್ನೇಕ್ ಸುರೇಶ್ ಪೂಜಾರಿ ಯಶಸ್ವಿಯಾಗಿದ್ದಾರೆ.
ಸಿದ್ದಾಪುರ ಸಮೀಪದ ನೆಲ್ಯಹುದಿಕೇರಿ ಗ್ರಾಮದ ಶಾಲಿ ಎಂಬುವವರು ಮನೆಯ ಹೊರ ಭಾಗದಲ್ಲಿ ಇಟ್ಟಿದ್ದ ಶೂ ಒಳಗೆ ಹಾವು ಸೇರಿಕೊಂಡಿತ್ತು. ಇಂದು ಬೆಳಗ್ಗೆ ಕೆಲಸಕ್ಕೆಂದು ತೆರಳಲು ಶೂ ತೆಗೆದಾಗ ಹಾವು ಇರುವುದು ಕಂಡು ಬಂತು. ಆತಂಕಗೊಂಡ ಶಾಲಿ ಅವರು ತಕ್ಷಣ ಸ್ನೇಕ್ ಸುರೇಶ್ ಪೂಜಾರಿ ಅವರಿಗೆ ಮಾಹಿತಿ ನೀಡಿದರು.
ಸ್ಥಳಕ್ಕೆ ಬಂದ ಸುರೇಶ್ ಹಾವನ್ನು ಸೆರೆ ಹಿಡಿದು ನಂತರ ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟರು. ಮನೆಯ ಹೊರ ಭಾಗದಲ್ಲಿರುವ ಪಾದರಕ್ಷೆ ಮತ್ತಿತರ ವಸ್ತುಗಳನ್ನು ಬಳಸುವಾಗ ಎಚ್ಚರಿಕೆಯಿಂದ ಸೂಕ್ಷ್ಮವಾಗಿ ಗಮನಿಸಬೇಕು. ಹಾವುಗಳು ಕಂಡು ಬಂದಲ್ಲಿ ಕೊಲ್ಲದೆ ಉರಗ ರಕ್ಷಕರಿಗೆ ಮಾಹಿತಿ ನೀಡಬೇಕು ಎಂದು ಸುರೇಶ್ ಮನವಿ ಮಾಡಿದ್ದಾರೆ.
Breaking News
- *ಪ್ರತೀ ಜಿಲ್ಲೆಯಲ್ಲೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ : ಸಿ.ಎಂ ಘೋಷಣೆ*
- *ಖೋ ಖೋ ವಿಶ್ವಕಪ್ : ರಾಜ್ಯದ ಇಬ್ಬರು ಆಟಗಾರರಿಗೆ ತಲಾ 5 ಲಕ್ಷ ರೂ. ಘೋಷಿಸಿದ ಸಿಎಂ*
- *ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನದ ಆಕರ್ಷಣೆ*
- *ರೈಲ್ವೆ ಇಲಾಖೆಯ 32,438 ಗ್ರೂಪ್-ಡಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ*
- *ಭಾಗಮಂಡಲ ಗ್ರಾ.ಪಂ ವತಿಯಿಂದ ಅಂಗನವಾಡಿಗಳಿಗೆ ಕೊಡುಗೆ*
- *ಗಣರಾಜ್ಯೋತ್ಸವದಂದು ಸಿಎನ್ಸಿಯಿಂದ ಶಾಂತಿಯುತ ಹಕ್ಕೊತ್ತಾಯ ಮಂಡನೆ*
- *ಪ್ರಾಣಿ ದಯಾಸಂಘದ ವಾರ್ಷಿಕ ಮಹಾಸಭೆ : ಹಲವು ವಿಚಾರ ಕುರಿತು ಚರ್ಚೆ*
- *ರಾಜಾಸೀಟು ಉದ್ಯಾನದಲ್ಲಿ ಕಣ್ಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ : ಶಾಸಕ ಡಾ.ಮಂತರ್ ಗೌಡ ಉದ್ಘಾಟನೆ*
- *ರಾಜಾಸೀಟು ಫಲಪುಷ್ಪ ಪ್ರದರ್ಶನದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರ ದೇವಾಲಯದ ಆಕರ್ಷಣೆ*
- *ಮಡಿಕೇರಿಯಲ್ಲಿ ಹಿರಿಯ ನಾಗರಿಕರಿಗೆ ಕಣ್ಣಿನ ತಪಾಸಣಾ ಶಿಬಿರ*