ಮಡಿಕೇರಿ ಸೆ.16 : ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಭಾರತೀಯ ಸಂವಿಧಾನದ ಪ್ರಸ್ತಾವನೆಯ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು.
ಒಂದು ಸಾವಿರದ ಐದುನೂರಕ್ಕೂ ಅಧಿಕ ವಿದ್ಯಾರ್ಥಿಗಳು ಏಕಕಾಲದಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ಒಟ್ಟಾಗಿ ಓದಿ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು.
ಸಂವಿಧಾನದ ಪೀಠಿಕೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಪ್ರೊ. ರಾಘವ ಬಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ, ಬೋಧಕೇತರ ವರ್ಗ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.