ಮಡಿಕೇರಿ ಸೆ.16 : ಮೈಸೂರಿನ ಕಲಾ ಮಂದಿರದಲ್ಲಿ ಸೆ.26 ರಂದು ನಡೆಯಲಿರುವ ವಿಶ್ವ ಕಿವುಡರ ದಿನಾಚರಣೆಗೆ ಕೊಡಗು ಜಿಲ್ಲಾ ಕಿವುಡರ ಸಂಘದ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
ಅಂದು ಬೆಳಿಗ್ಗೆ 9 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಮುಖ್ಯಮಂತ್ರಿ, ಶಾಸಕರು, ಜಿಲ್ಲಾಧಿಕಾರಿ, ಪೊಲೀಸ್ ಅಧೀಕ್ಷಕರು ಸೇರಿದಂತೆ ಗಣ್ಯರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮಕ್ಕೆ ಸುಮಾರು 25 ಜಿಲ್ಲಾ ಕಿವುಡರ ಸಂಘದ 600ಕ್ಕೂ ಹೆಚ್ಚು ಮಂದಿ ಪ್ರಥಮ ಬಾರಿಗೆ ಪಾಲ್ಗೊಳ್ಳಲಿದ್ದಾರೆ ಎಂದು ಕೊಡಗು ಜಿಲ್ಲಾ ಕಿವುಡರ ಸಂಘದ ಆಡಳಿತ ಮಂಡಳಿ ಸದಸ್ಯರು ತಿಳಿಸಿದ್ದಾರೆ.









