ಮಡಿಕೇರಿ ಸೆ.18 : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ವಿವಿಧ ಕಾರ್ಯಕ್ರಮಗಳ ಅಂಗವಾಗಿ ಕಡಂಗ ಹಾಗೂ ಸುತ್ತಮುತ್ತಲಿನ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿದರು.
ಕಡಂಗ ಮೊಹಿಯದ್ದೀನ್ ಜುಮಾ ಮಸೀದಿಗೆ ಭೇಟಿ ನೀಡಿ ಮಸೀದಿಯ ಅಹಾವಲು ಸ್ವೀಕರಿಸಿದರು. ಈ ಸಂದರ್ಭ ಮಸೀದಿ ವತಿಯಿಂದ ಶಾಸಕರನ್ನು ಸನ್ಮಾನಿಸಲಾಯಿತು.
ಮಸೀದಿ ಅಧ್ಯಕ್ಷ ಅಬ್ದುಲ ಮತ್ತು ಆಡಳಿತ ಮಂಡಳಿ ಸದಸ್ಯರು ಹಾಜರಿದ್ದರು.
ನಂತರ ಅರಪಟ್ಟು ಗ್ರಾಮದ ಶ್ರೀ ಭಗವತಿ ದೇವಾಲಯಕ್ಕೆ ಭೇಟಿ ನೀಡಿದರು. ಈ ಸಂದರ್ಭ ದೇವಾಲಯದ ಅಧ್ಯಕ್ಷ ನೆರಪಂಡ ಚಿತ್ರ ಬೆಳ್ಯಪ್ಪ ಮತ್ತು ಆಡಳಿತ ಮಂಡಳಿ ಸದಸ್ಯರು ಹಾಜರಿದ್ದರು.
ಕಡಂಗ ಪಟ್ಟಣದಲ್ಲಿರುವ ಬದ್ರಿಯಾ ಜುಮಾ ಮಸೀದಿಗೆ ಭೇಟಿ ನೀಡಿದರು. ಇದೇ ಸಂದರ್ಭ ಶಾಸಕರುಗಳನ್ನು ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಮಸೀದಿಯ ಅಧ್ಯಕ್ಷ ಅಬ್ದುಲ್ ರಹಮಾನ್ ಅರಫಾ, ಉಪಾಧ್ಯಕ್ಷ ಉಸ್ಮಾನ್ ಮತ್ತು ಸದಸ್ಯರು ಹಾಜರಿದ್ದರು.
ನೂತನವಾಗಿ ಆಯ್ಕೆಯಾದ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರನ್ನು ಮಸೀದಿ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಕಾಂಗ್ರೆಸ್ ರಾಜ್ಯ ವಕ್ತಾರ ಸಂಕೇತ್ ಪೂವಯ್ಯ, ಅಲ್ಪಸಂಖ್ಯಾತ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಹನೀಫಾ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಹಿಲ್, ನರಿಯಂದಡ ಗ್ರಾ.ಪಂ ಉಪಾಧ್ಯಕ್ಷ ಕೊಡಿರ ವಿನೋದ್ ನಾಣಯ್ಯ, ಸದಸ್ಯರಾದ ಸಿ.ಇ.ಸುಬಿರ್, ಶಾಫಿ ಎಡಪಾಲ ಮತ್ತು ಗ್ರಾ.ಪಂ ಸದಸ್ಯರು, ಭಕ್ತರು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.












