ಸುಂಟಿಕೊಪ್ಪ ಸೆ.18 : ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ಸುಂಟಿಕೊಪ್ಪ ಬಿಜೆಪಿ ಪಕ್ಷದ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು.
ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಅವರ ನೇತೃತ್ವದಲ್ಲಿ ಮಾದಾಪುರ ರಸ್ತೆಯ ಶ್ರೀ ವೃಕ್ಷೋದ್ಭವ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಧಾನಿಯವರ ಭವಿಷ್ಯ ಉಜ್ವಲವಾಗಲೆಂದು ಹಾರೈಸಿದರು.
ನಂತರ ‘ಸ್ವಸ್ಥ’ ವಸತಿ ವಿಶೇಷ ಚೇತನರ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸಲಾಯಿತು.
ಪ್ರಧಾನಿ ಮಂತ್ರಿ ಮೋದಿ ಅವರು ದೇಶದ ಚುಕ್ಕಾಣಿ ಹಿಡಿದ ನಂತರ ಅಭಿವೃದ್ಧಿ ಪರಪಂಚದಲ್ಲೇ ಅಭಿವೃದ್ಧಿ ಪಥದತ್ತ ಸಾಗುತ್ತಿರುವ ದೇಶವಾಗಿದೆ ಎಂದು ಹೇಳಿದರು.
ಈ ಸಂದರ್ಭ ಸುಂಟಿಕೊಪ್ಪ ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನಿಲ್ಕುಮಾರ್, ಶಕ್ತಿ ಕೇಂದ್ರದ ಪ್ರಮುಖ್ ವಾಸುದೇವ್, ಜಿಲ್ಲಾ ಒಬಿಸಿ ಉಪಾಧ್ಯಕ್ಷ ಬಿ.ಕೆ.ಮೋಹನ್, ತಾಲೂಕು ಪ್ರಧಾನ ಕಾರ್ಯದರ್ಶಿ ಗೌತಮ್, ಯುವಮೋರ್ಚಾ ಮಾಜಿ ಅಧ್ಯಕ್ಷ ಧನುಕಾವೇರಪ್ಪ, ಓಬಿಸಿ ಅಧ್ಯಕ್ಷ ಸಿ.ಸಿ.ಸುನಿಲ್, ಶಿವು ಹಾಗೂ ಶಾಲೆಯ ಅಧ್ಯಾಪಕ ವೃಂದದವರು ಹಾಜರಿದ್ದರು.