ಮಡಿಕೇರಿ ಸೆ.18 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ ಗೈಡ್ ಸಹ ಕಾರ್ಯದರ್ಶಿಯಾಗಿ ಸಾಹಿತಿ, ನಟಿ ಹಾಗೂ ನಿರ್ಮಾಪಕಿ ಈರಮಂಡ ಹರಿಣಿ ವಿಜಯ್ ನೇಮಕಗೊಂಡಿದ್ದಾರೆ.
ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ದೇಶಭಕ್ತಿ ಗಾಯನ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಸಂಸ್ಥೆಯ ಜಿಲ್ಲಾ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯು ಅವರು ಹರಿಣಿ ವಿಜಯ್ ಅವರಿಗೆ ಆದೇಶದ ಪ್ರತಿಯನ್ನು ನೀಡಿ ಅಭಿನಂದಿಸಿದರು. ಜಿಲ್ಲಾ ತರಬೇತಿ ಆಯುಕ್ತೆ ಮೈಥಲಿ ರಾವ್ ಬರ ಮಾಡಿಕೊಂಡರು.
ಜಿಲ್ಲಾ ಗೈಡ್ ಆಯುಕ್ತರಾದ ಪದ್ಮಶ್ರೀ ಐಮುಡಿಯಂಡ ರಾಣಿ ಮಾಚಯ್ಯ, ಸ್ಥಾನಿಕ ಆಯುಕ್ತ ಹೆಚ್.ಆರ್.ಮುತ್ತಪ್ಪ, ಸಹ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ, ಜಿಲ್ಲಾ ಸಂಘಟಕರಾದ ದಮಯಂತಿ ಅವರ ಉಪಸ್ಥಿತರಿದ್ದರು.
ಜಿಲ್ಲೆಯ ವಿವಿಧ ಶಾಲೆಗಳ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ದೇಶಭಕ್ತಿ ಗಾಯನ ಸ್ಪರ್ಧೆ ನಡೆಯಿತು.









