ಮಡಿಕೇರಿ ಸೆ.19 : ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವದ ಭಾಗವಾಗಿರುವ ‘ಬಹುಭಾಷಾ ಕವಿಗೋಷ್ಠಿ’ಯನ್ನು ಅಕ್ಟೋಬರ್ 18 ರ ಬುಧವಾರದಂದು ನಗರದ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ಆಯೋಜಿಸಲಾಗಿದೆ. ಇದರಲ್ಲಿ ಕವನಗಳನ್ನು ವಾಚನ ಮಾಡಲು ಆಸಕ್ತರಾಗಿರುವ ಕವಿ/ ಕವಿಯಿತ್ರಿಯರಿಂದ ಸ್ವರಚಿತ ಕವನ ಆಹ್ವಾನಿಸಲಾಗಿದೆ.
ಆಸಕ್ತ ಕವಿ/ ಕವಿಯಿತ್ರಿಯರು ಯಾವುದೇ ಒಂದು ಭಾಷೆಯ ಒಂದು ಕವನವನ್ನು ಅಕ್ಟೋಬರ್ 3 ರ ಒಳಗಾಗಿ ಕಳಹಿಸಿಕೊಡಬೇಕು. ಆ ನಂತರ ಬರುವ ಕವನಗಳನ್ನು ಪರಿಗಣಿಸಲಾಗುವುದಿಲ್ಲ.
ಈ ಬಾರಿಯ ಕವಿಗೋಷ್ಠಿಯಲ್ಲಿ ವರ್ಷಂಪ್ರತಿಯಂತೆ ಕನ್ನಡ, ಕೊಡವ, ಅರೆಭಾಷೆ, ತುಳು, ಕೊಂಕಣಿ, ಹವ್ಯಕ, ಬ್ಯಾರಿ, ಯರವ, ಕುಂಬಾರ, ಹಿಂದಿ, ಉರ್ದು, ತಮಿಳು, ಮಲೆಯಾಳಂ, ತೆಲುಗು, ಮರಾಠಿ, ಸಂಸ್ಕೃತ ಹೀಗೆ ಯಾವುದೇ ಭಾಷೆಯ ಕವನಗಳನ್ನು (ಹಿಂದಿ ಮತ್ತು ಇಂಗ್ಲೀಷ್ ಹೊರತುಪಡಿಸಿ) ‘ಕನ್ನಡ’ಲಿಪಿಯಲ್ಲೆ ಕಳುಹಿಸಿಕೊಡತಕ್ಕದ್ದು. ಕನ್ನಡ ಭಾಷೆಯ ಚುಟುಕು ಕವನ(4 ಸಾಲಿನ ಗರಿಷ್ಠ 4 ಕವನಗಳಿಗೆ ಮಾತ್ರ ಅವಕಾಶ)ಗಳು, ಮಕ್ಕಳ ಕವನ(6 ರಿಂದ 12 ವರ್ಷ ಒಳಪಟ್ಟವರು)ಗಳಿಗೂ ಅವಕಾಶ ಕಲ್ಪಿಸಲಾಗಿದೆ.
ಕವನಗಳನ್ನು ಕಳುಹಿಸುವವರು ತಮ್ಮ ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆ, ಭಾವಚಿತ್ರವನ್ನು ತಪ್ಪದೆ ಕಳುಹಿಸಿಕೊಡಬೇಕು. ಮಾಹಿತಿಗಳಿಲ್ಲದ ಕವನಗಳನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ. ಕವನಗಳನ್ನು ಮತ್ತು ಮಾಹಿತಿಯನ್ನು ವ್ಯಾಟ್ಸ್ ಅಪ್-8867689193, ಇ.ಮೇಲ್ dasarakavigoshti23@gmail.com ಮೂಲಕ ಕಳುಹಿಸಬಹುದು. ಈ ಸೌಲಭ್ಯ ಇಲ್ಲದಿರುವವರು ಅಂಚೆ ಮೂಲಕ ಈ ವಿಳಾಸಕ್ಕೆ ಅಗತ್ಯ ಮಾಹಿತಿಯೊಂದಿಗೆ ಕಳುಹಿಸಿಕೊಡಬಹುದು. ವಿಳಾಸ- ಅಧ್ಯಕ್ಷರು, ಬಹುಭಾಷಾ ಕವಿಗೋಷ್ಠಿ ಸಮಿತಿ, ಕೇರಾಫ್ ‘ಶಕ್ತಿ’ದಿನಪತ್ರಿಕೆ, ಕೈಗಾರಿಕಾ ಬಡಾವಣೆ, ಮಡಿಕೇರಿ-571201 (ಕವನಗಳನ್ನು ಅಂಚೆ ಮೂಲಕ ಕಳುಹಿಸುವವರು ಲಕೋಟೆಯ ಮೇಲೆ ದೊಡ್ಡದಾಗಿ ‘ಬಹುಭಾಷಾ ಕವಿಗೋಷ್ಠಿ ಕವನ’ ಎಂದು ನಮೂದಿಸಬೇಕು).
ಕವನಗಳ ನಿಬಂಧನೆಗಳು- ಯಾವುದೇ ಭಾಷೆಯಲ್ಲಿ ಸ್ವರಚಿತ, ಸಾಮಾಜಿಕ ಜಾಲ ತಾಣ ಸೇರಿದಂತೆ ಎಲ್ಲಿಯೂ ಪ್ರಕಟವಾಗದ ಕವನಗಳನ್ನು ಕಳುಹಿಸಬೇಕು. ಕವನಗಳು ಗರಿಷ್ಠ 20 ಸಾಲುಗಳನ್ನು ಮೀರಬಾರದು. ಯಾವುದೇ ಭಾಷೆಯ ಒಂದು ಕವನವನ್ನು ಮಾತ್ರ ಆಯ್ಕೆಗೆ ಕಳುಹಿಸಬೇಕು. ಎರಡೆರಡು ಭಾಷೆಗಳಲ್ಲಿ ಒಬ್ಬರೆ ಕವನಗಳನ್ನು ಕಳುಹಿಸಿದಲ್ಲಿ ಅವರ ಎಲ್ಲಾ ಕವನಗಳನ್ನು ತಿರಸ್ಕರಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗೆ ಸಮಿತಿಯ ಪ್ರಧಾನ ಕಾರ್ಯದರ್ಶಿ ಪಿ.ಎಂ.ರವಿ-9972073295, ಸದಸ್ಯರಾದ ಅಬ್ದುಲ್ ಕೌಸರ್ -7019124270, ರಂಜಿತ್ ಕವಲಪಾರ-9113069827 ಸಂಪರ್ಕಿಸಬಹುದು. ಆಯ್ಕೆಯಾದ ಕವನಗಳ ವಾಚನಕ್ಕೆ ಬಹುಭಾಷಾ ಕವಿಗೋಷ್ಠಿಯಂದು ಅವಕಾಶ ಒದಗಿಸಲಾಗುತ್ತದೆ. ಗೋಷ್ಠಿಯಲ್ಲಿ ಕವಿಗಳು ಕಡ್ಡಾಯವಾಗಿ ಆಯ್ಕೆಯಾದ ಕವನವನ್ನಷ್ಟೆ ವಾಚಿಸಬೇಕು. ಕವನಗಳನ್ನು ಹಾಡುವಂತಿಲ್ಲ ಮತ್ತು ಯಾವುದೇ ಪೀಠಿಕೆಗಳಿಗೆ ಅವಕಾಶವಿಲ್ಲ. ಆಯ್ಕೆ ಸಮಿತಿಯ ತೀರ್ಮಾನವೇ ಅಂತಿಮವಾಗಿದೆ ಎಂದು ಬಹುಭಾಷಾ ಕವಿಗೋಷ್ಠಿ ಸಮಿತಿಯ ಅಧ್ಯಕ್ಷರಾದ ಉಜ್ವಲ್ ರಂಜಿತ್ ತಿಳಿಸಿದ್ದಾರೆ.
Breaking News
- *ಪ್ರತೀ ಜಿಲ್ಲೆಯಲ್ಲೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ : ಸಿ.ಎಂ ಘೋಷಣೆ*
- *ಖೋ ಖೋ ವಿಶ್ವಕಪ್ : ರಾಜ್ಯದ ಇಬ್ಬರು ಆಟಗಾರರಿಗೆ ತಲಾ 5 ಲಕ್ಷ ರೂ. ಘೋಷಿಸಿದ ಸಿಎಂ*
- *ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನದ ಆಕರ್ಷಣೆ*
- *ರೈಲ್ವೆ ಇಲಾಖೆಯ 32,438 ಗ್ರೂಪ್-ಡಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ*
- *ಭಾಗಮಂಡಲ ಗ್ರಾ.ಪಂ ವತಿಯಿಂದ ಅಂಗನವಾಡಿಗಳಿಗೆ ಕೊಡುಗೆ*
- *ಗಣರಾಜ್ಯೋತ್ಸವದಂದು ಸಿಎನ್ಸಿಯಿಂದ ಶಾಂತಿಯುತ ಹಕ್ಕೊತ್ತಾಯ ಮಂಡನೆ*
- *ಪ್ರಾಣಿ ದಯಾಸಂಘದ ವಾರ್ಷಿಕ ಮಹಾಸಭೆ : ಹಲವು ವಿಚಾರ ಕುರಿತು ಚರ್ಚೆ*
- *ರಾಜಾಸೀಟು ಉದ್ಯಾನದಲ್ಲಿ ಕಣ್ಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ : ಶಾಸಕ ಡಾ.ಮಂತರ್ ಗೌಡ ಉದ್ಘಾಟನೆ*
- *ರಾಜಾಸೀಟು ಫಲಪುಷ್ಪ ಪ್ರದರ್ಶನದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರ ದೇವಾಲಯದ ಆಕರ್ಷಣೆ*
- *ಮಡಿಕೇರಿಯಲ್ಲಿ ಹಿರಿಯ ನಾಗರಿಕರಿಗೆ ಕಣ್ಣಿನ ತಪಾಸಣಾ ಶಿಬಿರ*