ಮಡಿಕೇರಿ ಸೆ.19 : ಜಿಲ್ಲಾ ಮಟ್ಟದಲ್ಲಿ ಸಾರ್ವಜನಿಕರ ಅಹವಾಲುಗಳಿಗೆ ಸೂಕ್ತ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಪ್ರತಿ ತಿಂಗಳು ‘ಜನತಾ ದರ್ಶನ’ ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಒದಗಿಸುವ ಸಂಬಂಧ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 25 ರಂದು ಏಕಕಾಲದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಂಬಂಧಿಸಿದ ಚುನಾಯಿತ ಪ್ರತಿನಿಧಿಗಳನ್ನು ಒಳಗೊಂಡಂತೆ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲು ಮುಖ್ಯಮಂತ್ರಿ ಅವರು ಅವರು ಸೂಚನೆ ನೀಡಿರುತ್ತಾರೆ.
ಅದರಂತೆ, ಕೊಡಗು ಜಿಲ್ಲೆಯಲ್ಲಿ ಸೆಪ್ಟೆಂಬರ್, 25 ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ “ಜನತಾ ದರ್ಶನ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕೊಡಗು ಜಿಲ್ಲಾಡಳಿತವು ‘ಜನತಾ ದರ್ಶನ’ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಆಯೋಜಿಸಿ ಸಾರ್ವಜನಿಕರಿಗೆ ಅದರ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ, ಸೆಪ್ಟೆಂಬರ್ 21 ಮತ್ತು 22 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ಸಾರ್ವಜನಿಕರು ಅವರ ಲಿಖಿತ ಅಹವಾಲುಗಳನ್ನು ಅಗತ್ಯ ದಾಖಲೆಗಳ ಸಹಿತ ಜಿಲ್ಲಾಡಳಿತ ಭವನದ ನೆಲಮಹಡಿಯಲ್ಲಿರುವ ‘ಸ್ಪಂದನ ಕೇಂದ್ರ’ದಲ್ಲಿ ತೆರೆದಿರುವ ‘ಜನತಾ ದರ್ಶನ’ ಕೋಶ/ವಿಭಾಗದಲ್ಲಿ ಮನವಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಈ ದಿವಸಗಳಂದು ಸ್ವೀಕೃತವಾದ ಮನವಿಗಳನ್ನು ಕ್ರೋಡೀಕರಿಸಿ ಆಧ್ಯತೆ ಮೇರೆಗೆ ಸೆಪ್ಟೆಂಬರ್ 25 ರಂದು ಪರಿಶೀಲನೆಗೆ ತೆಗೆದುಕೊಳ್ಳಲಾಗುವುದು. ಮುಂದುವರೆದು, ಸಾರ್ವಜನಿಕರು ಸೆಪ್ಟೆಂಬರ್ 25 ರಂದು ಸಹ ಅಹವಾಲು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ಈ ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಪ್ರಭಾರ ಜಿಲ್ಲಾಧಿಕಾರಿ ವರ್ಣಿತ್ ನೇಗಿ ಅವರು ಕೋರಿದ್ದಾರೆ.
Breaking News
- *ಪ್ರತೀ ಜಿಲ್ಲೆಯಲ್ಲೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ : ಸಿ.ಎಂ ಘೋಷಣೆ*
- *ಖೋ ಖೋ ವಿಶ್ವಕಪ್ : ರಾಜ್ಯದ ಇಬ್ಬರು ಆಟಗಾರರಿಗೆ ತಲಾ 5 ಲಕ್ಷ ರೂ. ಘೋಷಿಸಿದ ಸಿಎಂ*
- *ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನದ ಆಕರ್ಷಣೆ*
- *ರೈಲ್ವೆ ಇಲಾಖೆಯ 32,438 ಗ್ರೂಪ್-ಡಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ*
- *ಭಾಗಮಂಡಲ ಗ್ರಾ.ಪಂ ವತಿಯಿಂದ ಅಂಗನವಾಡಿಗಳಿಗೆ ಕೊಡುಗೆ*
- *ಗಣರಾಜ್ಯೋತ್ಸವದಂದು ಸಿಎನ್ಸಿಯಿಂದ ಶಾಂತಿಯುತ ಹಕ್ಕೊತ್ತಾಯ ಮಂಡನೆ*
- *ಪ್ರಾಣಿ ದಯಾಸಂಘದ ವಾರ್ಷಿಕ ಮಹಾಸಭೆ : ಹಲವು ವಿಚಾರ ಕುರಿತು ಚರ್ಚೆ*
- *ರಾಜಾಸೀಟು ಉದ್ಯಾನದಲ್ಲಿ ಕಣ್ಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ : ಶಾಸಕ ಡಾ.ಮಂತರ್ ಗೌಡ ಉದ್ಘಾಟನೆ*
- *ರಾಜಾಸೀಟು ಫಲಪುಷ್ಪ ಪ್ರದರ್ಶನದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರ ದೇವಾಲಯದ ಆಕರ್ಷಣೆ*
- *ಮಡಿಕೇರಿಯಲ್ಲಿ ಹಿರಿಯ ನಾಗರಿಕರಿಗೆ ಕಣ್ಣಿನ ತಪಾಸಣಾ ಶಿಬಿರ*