ಮಡಿಕೇರಿ ಸೆ.19 : ನಗರದ ವಿಜಯನಗರದಲ್ಲಿರುವ ಶ್ರೀ ವಿಜಯ ವಿನಾಯಕ ದೇವಾಲಯದಲ್ಲಿ ಗಣೇಶೋತ್ಸವ ಪ್ರಯುಕ್ತ ವಿಶೇಷ ಪೂಜಾದಿ ಸೇವೆಗಳು ನೆರವೇರಿದವು.
ಉತ್ಸವದ ಅಂಗವಾಗಿ ದೇವರಿಗೆ ವಿಶೇಷವಾಗಿ ಅಲಂಕಾರ ಮಾಡಲಾಗಿತ್ತು. ಸಾಮೂಹಿಕ ಗಣಹೋಮ ನಡೆದು ಮಧ್ಯಾಹ್ನ ಪೂರ್ಣಾಹುತಿಯೊಂದಿಗೆ ಮಹಾ ಮಂಗಳಾರತಿ ನೆರವೇರಿತು. ಬಳಿಕ ನೆರೆದಿದ್ದ ಭಕ್ತಾದಿಗಳಿಗೆ ತೀರ್ಥ-ಪ್ರಸಾದ ವಿತರಣೆ ಮಾಡಲಾಯಿತು. ದೇವಾಲಾಯದ ಪ್ರಧಾನ ಅರ್ಚಕ ಶ್ರೀಕೃಷ್ಣ ಉಪಾಧ್ಯ ನೇತೃತ್ವದಲ್ಲಿ ಹೋಮ, ಪೂಜಾದಿ ಸೇವೆಗಳು ನಡೆದವು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವರ ಕೃಪೆಗೆ ಪಾತ್ರರಾದರು.











