ಮಡಿಕೇರಿ ಸೆ.19 : ಕೊಡಗು ಜಿಲ್ಲೆಯಾದ್ಯಂತ ವಿಘ್ನ ನಿವಾರಕ ಶ್ರೀ ಗಣಪತಿಯ ಮೂರ್ತಿಗಳ ಪ್ರತಿಷ್ಠಾಪನೆಯೊಂದಿಗೆ ಗಣೇಶ ಚತುರ್ಥಿಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.
ಜಿಲ್ಲಾ ಕೇಂದ್ರ ಮಡಿಕೇರಿಯ ಐತಿಹಾಸಿಕ ಹಿನ್ನೆಲೆಯ ಶ್ರೀ ಕೋಟೆ ಗಣಪತಿ ದೇಗುಲದಲ್ಲಿ ಮಂಗಳವಾರ ಬೆಳಗ್ಗಿನಿಂದಲೆ ವಿಶೇಷ ಪೂಜೆ, ಹೋಮ ಹವನಾದಿ ಧಾರ್ಮಿಕ ಕಾರ್ಯಗಳು ನೂರಾರು ಭಕ್ತಾದಿಗಳ ಸಮ್ಮುಖದಲ್ಲಿ ನಡೆಯಿತು. ಸರದಿಯ ಸಾಲಿನಲ್ಲಿ ನಿಂತು ಭಕ್ತಾದಿಗಳು ದೇವರ ದರ್ಶನ ಪಡೆದರಲ್ಲದೆ, ಈಡುಗಾಯಿ ಸೇವೆ ಸಲ್ಲಿಸುತ್ತಿದ್ದ ದೃಶ್ಯಗಳು ಕಂಡು ಬಂದಿತು.
ನಗರ ವ್ಯಾಪ್ತಿಯ ವಿವಿಧ ಬಡಾವಣೆಗಳಲ್ಲಿ ಸುಮಾರು 37 ಕಡೆಗಳಲ್ಲಿ ವಿವಿಧ ಉತ್ಸವ ಸಮಿತಿಗಳಿಂದ ಗಣಪತಿಯ ಪ್ರತಿಷ್ಟಾಪನೆ, ವಿಶೇಷ ಪೂಜೆ, ಮಧ್ಯಾಹ್ನ ಅನ್ನದಾನ ಕಾರ್ಯಕ್ರಮಗಳು ನಡೆದವು. ಕೆಲ ಸಮಿತಿಗಳು ಸಂಜೆಯ ವೇಳೆ ಗಣಪತಿಯ ಉತ್ಸವ ಮೂರ್ತಿಯನ್ನು ನಗರದಲ್ಲಿ ಮೆರವಣಿಗೆ ನಡೆಸುವ ಮೂಲಕ ಗೌರಿ ಕೆರೆಯಲ್ಲಿ ವಿಸರ್ಜಿಸಿದರು.
ವಿರಾಜಪೇಟೆಯಲ್ಲಿ ಗೌರಮ್ಮನ ನಗರ ಪ್ರದಕ್ಷಿಣೆ ಸೇವೆ- ವಿರಾಜಪೇಟೆಯ ಜೈನರ ಬೀದಿಯ ಶ್ರೀ ಬಸವೇಶ್ವರ ದೇವಾಲಯದಲ್ಲಿ ಸೋಮವಾರ ಪ್ರದೇಶ ಗೌರಮ್ಮನ ಪಲ್ಲಕ್ಕಿಯ ನಗರ ಪ್ರದಕ್ಷಿಣೆ ಸೇವೆ ನಡೆಯಿತು. ನಗರದ ನೆಲ್ಲಮಕ್ಕಡ ಮೋಹನ್ ಅಯ್ಯಪ್ಪ ಅವರ ಕೆರೆಯಲ್ಲಿ ಶ್ರೀ ಬಸವೇಶ್ವರ ದೇವಾಲಯ ಪ್ರಧಾನ ಅರ್ಚಕರಾದ ಮೋಹನ್ ಭಟ್ ಅವರು ಅರ್ಚಕ ವೃಂದದವರಿಂದ ಕೆರೆಗೆ ಬಾಗಿನ ಅರ್ಪಿಸಿದರು. ಈ ಬಾರಿ ಅಲಂಕಾರ ವಸ್ತುವಾದ ಕನ್ನಡಿ ದೊರಕಿರುವುದು ವಿಶೇಷ. ಕನ್ನಡಿಯು ಹೆಂಗಳೆಯರಿಗೆ ತಮ್ಮ ಸೌಂದರ್ಯ ಪ್ರಜ್ಞೆ ತೋರುವ ದರ್ಪಣವಾದರು. ಹೊಸತು ಎಂಬುದನ್ನು ಬಿಂಬಿಸಲಾಗುತ್ತದೆ ಎಂದು ಪ್ರಧಾನ ಅರ್ಚಕರು ಹೇಳಿದರು.
ನಗರದ ತೆಲುಗರ ಬೀದಿಯಿಂದ ಆರಂಭವಾದ ಪಲ್ಲಕ್ಕಿ ಉತ್ಸವವು ಸಂಜೆಯ ವೇಳೆಗೆ ನಗರದ ಎಲ್ಲಾ ಬೀದಿಗಳಲ್ಲಿ ಸಂಚರಿಸಿ ಸುಮಂಗಲಿಯರಿಂದ ವಿಶೇಷ ಪೂಜೆಗಳನ್ನು ಪಡೆದು ಶ್ರೀ ಬಸವೇಶ್ವರ ದೇವಾಲಯಕ್ಕೆ ಆಗಮಿಸಿತು. ಈ ಸಂದಂರ್ಭ ದೇವಾಲಯದ ಪಧಾನ ಅರ್ಚಕರು, ದೇವಾಲಯದ ಆಡಳಿತ ಮಂಡಳಿಯ ಸದಸ್ಯರು ಹಾಜರಿದ್ದರು.
ವಿರಾಜಪೇಟೆ ನಗರದ ಐತಿಹಾಸಿಕ ಶ್ರೀ ಮಹಾ ಗಣಪತಿ ದೇವಾಲಯದಲ್ಲಿ ಇಂದು ಗಣಪತಿ ಉತ್ಸವ ಮೂರ್ತಿ ಪ್ರತಿಷ್ಟಾಪನೆ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು. ವಾದ್ಯಗೋಷ್ಠಿ ಮತ್ತು ಭಜನಾ ಮಂಡಳಿಯ ಸದಸ್ಯರ ಸಾರಥ್ಯದಲ್ಲಿ ಉತ್ಸವ ಮೂರ್ತಿಯನ್ನು ದೇವಾಲಯಕ್ಕೆ ತರಲಾಯಿತು. ಉತ್ಸವ ಮೂರ್ತಿಗೆ ವಿವಿಧ ಹೂಗಳಿಂದ ಅಲಂಕಾರ ಮಾಡಿ ನಂತರದಲ್ಲಿ ಮಾಹಾಪೂಜೆ ಸಲ್ಲಿಸಲಾಯಿತು. ವಿರಾಜಪೇಟೆ ನಗರದ ವಿವಿದೆಡೆಗಳಲ್ಲಿ 22 ಸ್ಥಳಗಳಲ್ಲಿ ಹಾಗೂ ವಿರಾಜಪೇಟೆ ಗ್ರಾಮಾಂತರ ಪ್ರದೇಶಗಳ ಐದು ಭಾಗಗಳಲ್ಲಿ ಗಣೇಶ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ಉತ್ಸವವನ್ನು ಶ್ರದ್ಧಾ ಭಕ್ತಿಗಳಿಂದ ಆಚರಿಸಲಾಯಿತು. ಸೆ.28 ರ ಅನಂತ ಪದ್ಮನಾಭ ವ್ರತದಂದು ಸಾಮೂಹಿಕವಾದ ಉತ್ಸವ ಮೂರ್ತಿಯ ಶೋಭಯಾತ್ರೆ ನಡೆಯಲಿದೆ.
ಜಿಲ್ಲೆಯ ವಿವಿಧೆಡೆಗಳಲ್ಲಿ ಗಣೇಶನ ಮೂರ್ತಿಯನ್ನು ಪ್ರತಿಷ್ಟಾಪಿಸುವ ಮೂಲಕ ಗಣೇಶನ ಆರಾಧನೆ ಶ್ರದ್ಧಾಭಕ್ತಿಗಳೊಂದಿಗೆ ಸಂಭ್ರಮದಿಂದ ನಡೆಯಿತು.
Breaking News
- *ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದ ಅರ್ಚಕರ ಮೇಲೆ ಹಲ್ಲೆ : ಕಾಂಗ್ರೆಸ್ ಕಾರ್ಯಕರ್ತ ಅಮಾನತು*
- *ಕಟ್ಟೆಮಾಡು ಗ್ರಾಮದ ಶ್ರೀ ಮಹಾ ಮೃತ್ಯುಂಜಯ ದೇವಸ್ಥಾನದ ಪ್ರಧಾನ ಅರ್ಚಕ ವಿಘ್ನೇಶ್ ಭಟ್ ಮೇಲೆ ಹಲ್ಲೆ*
- *ಸಿಎನ್ಸಿಯಿಂದ ಅಂತರಾಷ್ಟ್ರೀಯ ಹತ್ಯಾಕಾಂಡದ ನೆನಪಿನ ದಿನ ಆಚರಣೆ*
- *ಪದ್ಮಶ್ರೀ ಪುರಸ್ಕೃತ ಡಾ.ವಿಜಯಲಕ್ಷ್ಮಿ ದೇಶಮಾನೆ ಅವರಿಗೆ ಕೊಡಗು ಜಿಲ್ಲಾ ವಿಶ್ವ ಹಿಂದೂ ಪರಿಷದ್, ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ ಅಭಿನಂದನೆ*
- *‘ಕೃತಕ ಅಂಗಾಂಗಗಳ ಜೋಡಣೆ ಮತ್ತು ಆರೋಗ್ಯ ತಪಾಸಣೆ’ ಶಿಬಿರ : ಬಡವರಿಗೆ ಅಗತ್ಯ ಆರೋಗ್ಯ ಸೌಲಭ್ಯ : ಸಚಿವ ಭೋಸರಾಜು*
- *ರಾಜ್ಯದಲ್ಲೇ ವಿನೂತನ ಪ್ರಯತ್ನ : ‘ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆ’ ಉದ್ಘಾಟನೆ*
- *ಕೆ.ಎಸ್.ದರ್ಶನ್ ಗೆ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿ ಪ್ರದಾನ*
- *ಕಾಲ್ಚೆಂಡು ಪಂದ್ಯಾವಳಿ : ತ್ರಿವೇಣಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಚಾಂಪಿಯನ್*
- *ವಿರಾಜಪೇಟೆ : ವಿವಿಧತೆಯಲ್ಲಿ ಏಕತೆಕಂಡಿರುವ ಸಂವಿಧಾನವನ್ನು ಗೌರವಿಸುವಂತಾಗಬೇಕು : ವಕೀಲ ಪುಷ್ಪರಾಜ್*
- *ಸೋಮವಾರಪೇಟೆ : ಅಗ್ನಿಶಾಮಕ ಠಾಣೆಯ ನೂತನ ಕಟ್ಟಡ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*