ಮಡಿಕೇರಿ ಸೆ.20 : ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷ ಪೂರ್ಣಗೊಳ್ಳಲಿರುವ ಸುವರ್ಣ ಮಹೋತ್ಸವದ ಸುಸಂದರ್ಭದಲ್ಲಿ “ಕರ್ನಾಟಕ ಸಂಭ್ರಮ 50” “ಹೆಸರಾಗಲಿ ಕರ್ನಾಟಕ ಉಸಿರಾಗಲಿ ಕನ್ನಡ” ಎಂಬ ಶೀರ್ಷಿಕೆಯಡಿ ರಾಜ್ಯಾದ್ಯಂತ ವರ್ಷಪೂರ್ತಿ ವೈವಿಧ್ಯಮಯವಾಗಿ, ವರ್ಣಮಯವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಇದಕ್ಕೊಂದು ವಿಶೇಷ ಮೆರುಗು ನೀಡಲು ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಉದ್ದೇಶಿಸಿದೆ.
ಕಾರ್ಯಕ್ರಮದ ಸಂಭ್ರಮವನ್ನು ಹೆಚ್ಚಿಸಲು ಕನ್ನಡ ನಾಡು-ನುಡಿ-ಸಂಸ್ಕೃತಿಯನ್ನು ಬಿಂಬಿಸುವ ವಿಶಿಷ್ಟವಾದ ಲಾಂಛನ (ಲೋಗೋ)ವನ್ನು ಬಳಸಲು ತೀರ್ಮಾನಿಸಲಾಗಿದ್ದು, ಆಸಕ್ತರಿಂದ ಸುಂದರವಾದ ಲಾಂಛನ(ಲೋಗೋ)ದ ಮಾದರಿಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾಗುವ ಮಾದರಿ ಲಾಂಛನಕ್ಕೆ ರೂ 25 ಸಾವಿರ ಬಹುಮಾನವನ್ನು ನಿಗದಿಪಡಿಸಲಾಗಿದೆ.
ಲಾಂಛನ(ಲೋಗೋ)ದ ಮಾದರಿಯನ್ನು ಕಳುಹಿಸಲು ಸೆಪ್ಟೆಂಬರ್, 20 ರಿಂದ 30 ರವರೆಗೆ ಅವಕಾಶವಿದೆ. ಆಸಕ್ತರು ಈ ಕುರಿತು ಅಗತ್ಯ ಮಾಹಿತಿಗಳನ್ನು ಇಲಾಖೆಯ ಜಾಲತಾಣ https://www.kannadasiri.karnataka.gov.in ದಲ್ಲಿ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.
Breaking News
- *ಭಾಗಮಂಡಲ ಫ್ಲೈ ಓವರ್ – ಫ್ಲಾಶ್ ಬ್ಯಾಕ್*
- *ಅರ್ಚಕರ ಮೇಲೆ ನಡೆದ ಹಲ್ಲೆ ಪ್ರಕರಣ : ಸಹಕರಿಸಿದ ಆರೋಪಿಗಳು ಹಾಗೂ ವಾಹನಗಳು ವಶ : ಆರೋಪಿಗಳಿಗೆ ಸಹಾಯ ಮಾಡುತ್ತಿರುವವರ ಕುರಿತು ಮಾಹಿತಿ ಒದಗಿಸಲು ಎಸ್ಪಿ ಮನವಿ*
- *ಮುಖ್ಯಮಂತ್ರಿಗಳಿಗೆ ಕೊಡಗು ಎಸ್ಡಿಪಿಐಯಿಂದ ಪಂಚ ಪ್ರಶ್ನೆ*
- *ಜೀವ ಬೆದರಿಕೆ ಇದೆ ಎಂದು ಆರೋಪಿಸಿ ದೂರು ನೀಡಿದ ಎನ್.ಯು.ನಾಚಪ್ಪ*
- *ಮಡಿಕೇರಿಯಲ್ಲಿ ಹುತಾತ್ಮ ದಿನಾಚರಣೆ : ಗಾಂಧೀಜಿ ತತ್ವ, ಆದರ್ಶ ಮೈಗೂಡಿಸಿಕೊಳ್ಳಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಕರೆ*
- *ಕೊಡಗು : ಫೆ.13 ರವರೆಗೆ “ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ”*
- *ಒಳಮೀಸಲಾತಿ ಶೀಘ್ರ ಜಾರಿಗೆ ತರಲು ದಲಿತ ಸಂಘರ್ಷ ಸಮಿತಿ ಆಗ್ರಹ*
- *ಮೂರ್ನಾಡು ಗಜಾನನ ಯುವಕ ಸಂಘ ಖಂಡನೆ*
- *ಅಮಾಯಕರ ಮೇಲಿನ ಹಲ್ಲೆ ಖಂಡನೀಯ : ಮೂರ್ನಾಡು ಆಪ್ತಮಿತ್ರ ಬಳಗ ಅಸಮಾಧಾನ*
- *ವಿರಾಜಪೇಟೆ ಕೊಡವ ಪೊಮ್ಮಕ್ಕಡ ಒಕ್ಕೂಟದಿಂದ ಸಂಭ್ರಮದ ಪುತ್ತರಿ ಒತ್ತೋರ್ಮೆ ಕೂಟ*