ವಿರಾಜಪೇಟೆ ಸೆ.20 : ಶಾಲಾ ಶಿಕ್ಷಣ ಇಲಾಖೆ, ವಿರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮತ್ತು ಕ್ಷೇತ್ರ ಶಿಕ್ಷಣ ಸಮನ್ವಯ ಅಧಿಕಾರಿಗಳ ಕಚೇರಿ, ಇವರ ಸಹಯೋಗದಲ್ಲಿ ವಿರಾಜಪೇಟೆಯ ಕ್ಷೇತ್ರ ಶಿಕ್ಷಣ ಸಮನ್ವಯ ಅಧಿಕಾರಿಗಳ ಕಚೇರಿ ಆವರಣದಲ್ಲಿ ವಿವಿಧ ಬಗೆಯ ಸಸಿಗಳನ್ನು ನೆಡುವ ವಿನೂತನ ಕಾರ್ಯಕ್ರಮವಾದ ಸಸ್ಯ ಶ್ಯಾಮಲಾ ಕಾರ್ಯಕ್ರಮವನ್ನು ಆಚರಿಸಲಾಯಿತು.
ವಿರಾಜಪೇಟೆ ತಾಲೂಕಿನ ಕ್ಷೇತ್ರ ಶಿಕ್ಷಣ ಅಧಿಕಾರಿ ಎಂ.ಪ್ರಕಾಶ್ ಗಿಡಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಂತರ ಮಾತನಾಡಿದ ಪ್ರಕಾಶ್ ಅವರು ಈ ಕಾರ್ಯಕ್ರಮದ ವಿಶೇಷತೆ ಮತ್ತು ಮಹತ್ವದ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭ ಕ್ಷೇತ್ರ ಶಿಕ್ಷಣ ಸಮನ್ವಯ ಅಧಿಕಾರಿ ವನಜಾಕ್ಷಿ, ವಿರಾಜಪೇಟೆ ಮತ್ತು ಕಲ್ತೋಡು ಕ್ಲಸ್ಟರ್ ಮಟ್ಟದ ಸಿಆರ್‍ಪಿ ವಿ.ಟಿ.ವೆಂಕಟೇಶ್, ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕ ಹಾಗೂ ಜಿಲ್ಲಾ ಸಂಘದ ಅಧ್ಯಕ್ಷ ಪ್ರವೀಣ್, ಸ್ಥಳೀಯ ಶಾಲೆಯ ಮುಖ್ಯ ಶಿಕ್ಷಕಿ ಪಿ.ಡಿ.ಅನ್ನಮ್ಮ, ವಿರಾಜಪೇಟೆ ಮತ್ತು ಕಲ್ತೋಡು ಕ್ಲಸ್ಟರ್ ಮಟ್ಟದ ಶಿಕ್ಷಕರು ಹಾಗೂ ಅತಿಥಿ ಶಿಕ್ಷಕರು ಮತ್ತು ಶಾಲಾ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.








