ವಿರಾಜಪೇಟೆ ಸೆ.20 : ವಿರಾಜಪೇಟೆ ಪಟ್ಟಣದ ಮೀನುಪೇಟೆಯ ಶ್ರೀ ವಿಶ್ವ ವಿನಾಯಕ ಗಣೇಶೋತ್ಸವ ಸಮಿತಿಯ ವತಿಯಿಂದ ಗೌರಿ ಗಣೇಶೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಗಣಪತಿ, ಗೌರಿ ಮೂರ್ತಿಗಳ ಪ್ರತಿಷ್ಠಾಪನೆ, ಗಣಪತಿ ಹೋಮ, ವಿಶೇಷ ಪೂಜೆಯನ್ನು ನಡೆಸಲಾಯಿತು.
ಅರ್ಚಕರಾದ ವೇಣುಗೋಪಾಲ್ ಭಟ್ ಮಹಾಪೂಜೆಯನ್ನು ನೆರವೇರಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಬಳಿಕ ಪ್ರಸಾದ ವಿತರಣೆ ಹಾಗೂ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಶ್ರೀ ವಿಶ್ವ ವಿನಾಯಕ ಸಮಿತಿಯ ಸದಸ್ಯರುಗಳು, ಭಕ್ತಾದಿಗಳು ಉಪಸ್ಥಿತರಿದ್ದರು.









