ಮಡಿಕೇರಿ ಸೆ.20 : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನೆಯ 20ನೇ ವಾರ್ಷಿಕೋತ್ಸವವು ಸೆ.24 ರಿಂದ 26ರ ವರೆಗೆ ನಡೆಯಲಿದೆ.
ಸೆ.24 ರಂದು ಸಂಜೆ 6 ಗಂಟೆಗೆ ಗುರು ಗಣಪತಿ ಪೂಜೆ, ಪುಣ್ಯಾಹ, ಸಂಕಲ್ಪ, ದುರ್ಗಾ ಸಪ್ತಶತಿ ಪಾರಾಯಣ, ಮಹಾಪೂಜೆ, ದೀಪರಾಧನೆ ಹಾಗೂ ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ.
ಸೆ.25 ರಂದು ಬೆಳಿಗ್ಗೆ 8 ಗಂಟೆಗೆ ಚಂಡಿಕಾ ಹೋಮ, ಮಧ್ಯಾಹ್ನ 12 ಗಂಟೆಗೆ ಪೂರ್ಣಾಹುತಿ ಹಾಗೂ ಮಹಾ ಮಂಗಳಾರತಿ ಜರುಗಲಿದ್ದು, ತೀರ್ಥಪ್ರಸಾದ ವಿನಿಯೋಗ ನೆರವೇರಲಿದೆ.
ಸಂಜೆ 6 ಗಂಟೆಯಿಂದ ವಾರ್ಷಿಕೋತ್ಸವ ಕಾರ್ಯಕ್ರಮಗಳು ಆರಂಭವಾಗಲಿದ್ದು, ಗುರು ಗಣಪತಿ ಹೋಮ, ಪುಣ್ಯಾಹ, ಸಂಕಲ್ಪ, ಕಳಶಸ್ಥಾಪನೆ, ದೀಪಾರಾಧನೆ, ಅಷ್ಠಾವಧಾನ ಸೇವೆ ನಂತರ ತೀರ್ಥಪ್ರಸಾದ ವಿನಿಯೋಗವಾಗಲಿದೆ.
ಸೆ.26 ರಂದು ಬೆಳಿಗ್ಗೆ ಗುರುಗಣಪತಿ ಪೂಜೆ, ಪುಣ್ಯಾಹ, ಗಣಪತಿ ಹೋಮ, ಕಲಾಹೋಮ, ತತ್ವಹೋಮ, ತತ್ವಶಾಂತಿ ಹೋಮ, ದುರ್ಗಾ ಹೋಮ, ತತ್ವಕಲಶಾಭಿಷೇಕ, ಮಹಾಪೂಜೆ, ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ.
ಮಧ್ಯಾಹ್ನ 12.30 ಗಂಟೆಗೆ ಅನ್ನದಾನ ನೆರವೇರಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲಯದ ಮ್ಯಾನೇಜಿಂಗ್ ಟ್ರಸ್ಟಿ ಮತ್ತು ಆಡಳಿತ ಮಂಡಳಿ ಕೋರಿದೆ.









