ಮಡಿಕೇರಿ ಸೆ.20 : ಕುಶಾಲನಗರದ ನಿವೃತ್ತ ನೌಕರರ ಸಂಘದ ವತಿಯಿಂದ ಪೆರಿಯಾರ್ ರಾಮಸ್ವಾಮಿ ಅವರ ಜನ್ಮದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕುಶಾಲನಗರದ ಮಹಾಲಕ್ಷ್ಮಿ ರೆಸಿಡೆನ್ಸಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣ್ಯರು ಪೆರಿಯಾರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ನಂತರ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದ ಎಐಟಿಯುಸಿ ಕಾರ್ಮಿಕ ಸಂಘದ ಅಧ್ಯಕ್ಷ ಹೆಚ್.ಎಂ.ಸೋಮಪ್ಪ, ಪೆರಿಯಾರ್ ಅವರ ವಿಚಾರಧಾರೆಗಳು ಇಂದಿಗೂ ಪ್ರಸ್ತುತ, ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕು ಎಂದರು.
ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿದ್ದಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ದಲಿತ ಸಂಘರ್ಷ ಸಮಿತಿಯ ಅಧ್ಯಕ್ಷ ವೀರಭದ್ರಯ್ಯ, ಉಪಾಧ್ಯಕ್ಷ ಬಿ.ಸಿ.ರಾಜು, ಕಾರ್ಯದರ್ಶಿ ನಾಗರಾಜು, ಸಹಾ ಕಾರ್ಯದರ್ಶಿ ವಿ.ಟಿ.ರಾಮಯ್ಯ, ಪ್ರಮುಖರಾದ ಕದುಲಮ್ಮ, ಪಾರ್ವತಮ್ಮ, ಬೇಲಯ್ಯ, ಕೃಷ್ಣಪ್ಪ, ಮಲ್ಲಪ್ಪ, ಜಯಪ್ಪ, ಮುಂತಾದವರು ಹಾಜರಿದ್ದರು.










