ಮಡಿಕೇರಿ ಸೆ.20 : ಗೋಳಿಕಟ್ಟೆ ಹೊಸ ಬಡಾವಣೆಯ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ 2ನೇ ವರ್ಷದ ಗೌರಿ ಗಣೇಶೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಮುಂಜಾನೆ ಗಣ ಹೋಮದೊಂದಿಗೆ ಆರಂಭಗೊಂಡು, ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ನಂತರ ವಿಶೇಷ ಪೂಜೆ ಜರುಗಿತು.
ಬಳಿಕ ಪ್ರಸಾದ ವಿತರಣೆ ಹಾಗೂ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನಡೆಯಿತು.
ನಂತರ ಗಣೇಶ ಮೂರ್ತಿಯನ್ನು ಅಲಂಕೃತ ಮಂಟಪದಲ್ಲಿ ಕೊಂಡೊಯ್ದು ಗಬ್ಬಲಡ್ಕ ಬಾಣೆಯ ಹೊಳೆಯಲ್ಲಿ ವಿಸರ್ಜಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಸದಸ್ಯರು, ಗ್ರಾಮಸ್ಥರು ಹಾಗೂ ಭಕ್ತಾಧಿಗಳು ಹಾಜರಿದ್ದರು.









