ಸುಂಟಿಕೊಪ್ಪ ಸೆ.20 : ಐಗೂರು ಗ್ರಾ.ಪಂ ವ್ಯಾಪ್ತಿಯ ಕಾಜೂರು ಶ್ರೀ ಅಯ್ಯಪ್ಪ ದೇವಾಲಯ ಸಮಿತಿ ವತಿಯಿಂದ ಗಣೇಶ ಚತುರ್ಥಿ ಸಂಭ್ರಮದಿಂದ ಆಚರಿಸಲಾಯಿತು.
ಮುಂಜಾನೆ ಗೌರಿ-ಗಣೇಶನನ್ನು ಪ್ರತಿಷ್ಠಾಪಿಸಿ, ನಂತರ ಗಣಪತಿ ಹೋಮದೊಂದಿಗೆ ವಿವಿಧ ಪೂಜಾ ಕೈಂಕರ್ಯಗಳು ಜರುಗಿದವು.
ಸಂಜೆ ಶ್ರೀಗೌರಿ ಗಣೇಶ ಮೂರ್ತಿಯನ್ನು ಅಲಂಕೃತ ಭವ್ಯ ಮಂಟಪದಲ್ಲಿ ಕುಳ್ಳಿರಿಸಿ ವಾದ್ಯಗೋಷ್ಠಿಯೊಂದಿಗೆ ಮೆರವಣಿಗೆಯಲ್ಲಿ ಕೊಂಡೊಯ್ದು ಚೋರನ ಹೊಳೆಯಲ್ಲಿ ಗಣೇಶ ಮೂರ್ತಿಯನ್ನು ವಿಸರ್ಜಿಸಲಾಯಿತು.
ಈ ಸಂದರ್ಭ ಶ್ರೀ ಅಯ್ಯಪ್ಪ ದೇವಾಲಯ ಸಮಿತಿ ಅಧ್ಯಕ್ಷ ಎಸ್.ಎನ್.ಯೋಗೇಶ, ಗ್ರಾ.ಪಂ ಸದಸ್ಯ ಎಸ್.ಎನ್.ಯತೀಶ್ ರೈ, ಅಭಿಲಾಷ್, ಅಯ್ಯಪ್ಪ ಮೊದಲಾದವರು ಉಪಸ್ಥಿತರಿದ್ದರು.