ಮಡಿಕೇರಿ ಸೆ.20 : ಹಿರಿಯ ಕಾಂಗ್ರೆಸ್ಸಿಗ, ತಾ.ಪಂ ಮಾಜಿ ಸದಸ್ಯ ಹಾಗೂ ಹಿರಿಯ ಸಹಕಾರಿ ಮುತ್ತಾರ್ಮುಡಿಯ ಉಳುವಾರನ ಪಳಂಗಪ್ಪ ಅವರ ನಿಧನಕ್ಕೆ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಸಂತಾಪ ಸೂಚಿಸಿದೆ.
ಕಳೆದ ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಬಲವರ್ಧನೆಗಾಗಿ ಶ್ರಮಿಸಿದ ಮತ್ತು ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದ ಪಳಂಗಪ್ಪ ಅವರ ಅಗಲಿಕೆ ಪಕ್ಷಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಹಾಗೂ ಪದಾಧಿಕಾರಿಗಳು ಕಂಬನಿ ಮಿಡಿದಿದ್ದಾರೆ.








