ಮಡಿಕೇರಿ ಸೆ.20 : ಪ್ರಸಕ್ತ(2023-24) ಸಾಲಿಗೆ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಯಾತ್ರಾರ್ಥಿಗಳಿಗೆ ನಾಗಪುರಕ್ಕೆ ಭೇಟಿ ನೀಡಲು ಅನುಕೂಲವಾಗುವಂತೆ ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಬಸ್ಸುಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ದೀಕ್ಷಾ ಭೂಮಿಗೆ ಭೇಟಿ ನೀಡುವ ಯಾತ್ರಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್‍ಸೈಟ್ www.sw.kar.nic.in ನ ಮೂಲಕ ಅಕ್ಟೋಬರ್, 10 ರವರೆಗೆ ಅರ್ಜಿ ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.







