ಮಡಿಕೇರಿ ಸೆ.20 : ಹಾಲಿನ ಟ್ಯಾಂಕರ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮಡಿಕೇರಿ ಮೆಡಿಕಲ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿ ಮೃತಪಟ್ಟ ಘಟನೆ ಮಡಿಕೇರಿ ಸಮೀಪ ಕಾಟಕೇರಿ ಬಳಿ ನಡೆದಿದೆ. ಉಡುಪಿ ಮೂಲದ ವಿಜೇಶ್ ಎಂಬುವವರೇ ಮೃತ ದುರ್ದೈವಿ.
ಬುಧವಾರ ಸಂಜೆ ಉಡುಪಿಯಿಂದ ವಿಜೇಶ್ ಹಾಗೂ ಶಿವಾನಂದ್ ಬೈಕ್‌ನಲ್ಲಿ ಮಡಿಕೇರಿಗೆ ಆಗಮಿಸುತ್ತಿದ್ದರು. ಈ ವೇಳೆ ಕಾಟಕೇರಿ ಬಳಿ ಮಡಿಕೇರಿಯಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಬಹು ಚಕ್ರದ ಹಾಲಿನ ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಬೈಕ್ ಸವಾರ ವಿಜೇಶ್ ಮೃತಪಟ್ಟಿದ್ದು, ಹಿಂಬದಿ ಸವಾರ ಶಿವಾನಂದ್ ಅವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನು ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಡಿಕೇರಿ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಲಾರಿಯನ್ನು ವಶಪಡಿಸಿಕೊಂಡು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಮಡಿಕೇರಿ : ಅಪಘಾತದಲ್ಲಿ ಮೆಡಿಕಲ್ ಕಾಲೇಜ್ ವಿದ್ಯಾರ್ಥಿ ಸಾವು
1 Min ReadBy admin















