ನಾಪೋಕ್ಲು ಸೆ.21 : ಹೊದವಾಡ ಗ್ರಾಮದ ಶ್ರೀ ಭಗವತಿ ಗಣೇಶೋತ್ಸವ ಸಮಿತಿ ವತಿಯಿಂದ ಗಣೇಶೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಹೊದವಾಡ ಅಂಬಲದಲ್ಲಿ ಬೆಳಿಗ್ಗೆ ಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ವಿಶೇಷ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು.
ಬಳಿಕ ಭಕ್ತಾದಿಗಳಿಗೆ ತೀರ್ಥ ಪ್ರಸಾದ ವಿತರಿಸಿ, ಅನ್ನ ಸಂತರ್ಪಣೆ ಜರುಗಿತು.
ನಂತರ ಅಲಂಕೃತ ಮಂಟಪದಲ್ಲಿ ಗೌರಿ ಗಣೇಶ ಮೂರ್ತಿಗಳನ್ನು ಇರಿಸಿ ವಾದ್ಯ ಮೇಳಗದೊಂದಿಗೆ ಮೆರವಣಿಗೆಯಲ್ಲಿ ಸಾಗಿ ಪುಣ್ಯ ಕಾವೇರಿ ನದಿಯಲ್ಲಿ ಮೂರ್ತಿಗಳನ್ನು ವಿಸರ್ಜಿಸಲಾಯಿತು.
ಈ ಸಂದರ್ಭ ಉತ್ಸವ ಸಮಿತಿ ಪದಾಧಿಕಾರಿಗಳು, ಸದಸ್ಯರು ಹಾಗೂ ಗ್ರಾಮಸ್ಥರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿ ಸಂಭ್ರಮಿಸಿದರು.
ವರದಿ : ದುಗ್ಗಳ ಸದಾನಂದ.








