ವಿರಾಜಪೇಟೆ ಸೆ.22 : ವಿರಾಜಪೇಟೆ ಕಾವೇರಿ ಪದವಿ ಕಾಲೇಜು ವಿದ್ಯಾರ್ಥಿ ಕ್ಷೇಮ ಪಾಲನ ಸಂಘ 2023-24 ನೇ ಸಾಲಿಗೆ ವಿದ್ಯಾರ್ಥಿ ಪದಾಧಿಕಾರಿಗಳನ್ನು ಚುನಾವಣೆಯ ಮೂಲಕ ಆಯ್ಕೆ ಮಾಡಲಾಯಿತು.
ವಿದ್ಯಾರ್ಥಿ ಕ್ಷೇಮ ಪಾಲನ ಸಂಘದ ಉಪಾಧ್ಯಕ್ಷರಾಗಿ ಅಂತಿಮ ಬಿ.ಎ ತರಗತಿಯ ದೀಕ್ಷಿತ್ ಪೊನ್ನಮ್ಮ ಸಿ.ಎಂ. ಆಯ್ಕೆಯಾದರು.
ಪ್ರಧಾನ ಕಾರ್ಯದರ್ಶಿಯಾಗಿ ಅಂತಿಮ ಬಿ.ಎ.ದೀಕ್ಷಾ, ಕ್ರೀಡಾ ಕಾರ್ಯದರ್ಶಿಯಾಗಿ ದಾನಿಶ್ ಪೊನ್ನಣ್ಣ, ಜಂಟಿ ಕಾರ್ಯದರ್ಶಿಗಳಾಗಿ ದ್ವಿತೀಯ ಬಿಕಾಂನ ಮುತ್ತಣ್ಣ ಹಾಗೂ ಸೋನಿ ಎಮ್.ಪಿ ಆಯ್ಕೆಯಾದರು.
ಚುನಾವಣಾ ಪ್ರಕ್ರಿಯೆಯು ಕಾಲೇಜಿನ ಪ್ರಾಂಶುಪಾಲರಾದ ಡಾ.ಆನಂದ ಕೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನ ಸಂಘದ ಸಂಚಾಲಕಿ ಅಂಬಿಕಾ, ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಚಾಲಕಿ ವೀಣಾ ಹಾಗೂ ಕಾಲೇಜಿನ ಉಪನ್ಯಾಸಕ ವೃಂದದವರು ಹಾಜರಿದ್ದರು.
ಈ ಚುನಾವಣಾ ಪ್ರಕ್ರಿಯೆಯನ್ನು ಉಪನ್ಯಾಸಕರಾದ ಬೆನೆಡಿಕ್ ಸಲ್ದಾನ, ರಾಘವೇಂದ್ರ, ನಿರ್ಮಿತ ಇವರು ನಡೆಸಿಕೊಟ್ಟರು.








