ನಾಪೋಕ್ಲು ಸೆ.22 : ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ ಹಾಗೂ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನಿಂದ 2022-23ನೇ ಸಾಲಿನಲ್ಲಿ ಅತ್ಯುತ್ತಮ ಸಹಕಾರ ಸಂಘ ಎಂಬ ಪ್ರಶಸ್ತಿಗೆ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಭಾಜನವಾಗಿದೆ.
ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ 2022-23ರ ಸಾಲಿನ ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷ ಹಾಗೂ ಅಪೆಕ್ಸ್ ಬ್ಯಾ0ಕ್ ನಿರ್ದೇಶಕ ಕೊಡಂದೇರ ಗಣಪತಿ, ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಚ್.ಕೆ.ಲೋಕೇಶ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.
ವರದಿ : ದುಗ್ಗಳ ಸದಾನಂದ







