ಮಡಿಕೇರಿ ಸೆ.22 : ಕೊಡಗು ಜಿಲ್ಲಾ ಮಟ್ಟದ ಶಾಲಾ ಮಕ್ಕಳ ಹಾಗೂ ಪದವಿ ಪೂರ್ವ ವಿದ್ಯಾರ್ಥಿಗಳ ಕರಾಟೆ ಪಂದ್ಯಾವಳಿಯು ಸೆ.24 ರಂದು ಮಡಿಕೇರಿಯಲ್ಲಿ ನಡೆಯಲಿದೆ ಎಂದು ಕೊಡಗು ಕರಾಟೆ ಅಸೋಸಿಯೇಷನ್ ಸಂಯೋಜಕ ಮಾದೇಟಿರ ಪಿ.ತಿಮ್ಮಯ್ಯ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಂದು ನಗರದ ಜೂನಿಯರ್ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವಿವಿಧೋದ್ದೇಶ ಸಭಾಂಗಣದಲ್ಲಿ ನಡೆಯಲಿರುವ ಪಂದ್ಯಾವಳಿಯನ್ನು ಬೆಳಗ್ಗೆ 10 ಗಂಟೆಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಕೊಡಗು ಜಿಲ್ಲಾ ಶಿಕ್ಷಣಾಧಿಕಾರಿ ಅಜ್ಜಿಕುಟ್ಟಿರ ಸೌಮ್ಯ ಪೊನ್ನಪ್ಪ ಹಾಗೂ ಶಿಕ್ಷಣ ಇಲಾಖೆ ಕ್ರೀಡಾ ಮುಖ್ಯಸ್ಥ ಡಾ.ಸದಾಶಿವಯ್ಯ ಎಸ್.ಪಲ್ಲೇದ್ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.
ಕರಾಟೆ ಪಂದ್ಯಾವಳಿಗೆ ಮೈಸೂರು ಕರಾಟೆ ಅಸೋಸಿಯೇಷನ್‍ನ ತೀರ್ಪುಗಾರರು ಆಗಮಿಸಲಿದ್ದು, ಪಂದ್ಯಾವಳಿಯಲ್ಲಿ ಭಾಗವಹಿಸುವ ಎಲ್ಲಾ ವಿದ್ಯಾರ್ಥಿಗಳು ಬೆಳಗ್ಗೆ 9 ಗಂಟೆಯ ಒಳಗಾಗಿ ತಾಲ್ಲೂಕು ದೈಹಿಕ ಶಿಕ್ಷಣ ಅಧಿಕಾರಿಗಳ ಸಹಿ ಹೊಂದಿರುವ ಅರ್ಹತಾ ಪತ್ರ ಮತ್ತು ಆಧಾರ್ ಕಾರ್ಡ್ ಗುರುತಿನ ಚೀಟಿಯೊಂದಿಗೆ ಸ್ಥಳದಲ್ಲಿ ಹಾಜರಿರುವಂತೆ ತಿಮ್ಮಯ್ಯ ಮನವಿ ಮಾಡಿದ್ದಾರೆ.
ಕರಾಟೆ ಕ್ರೀಡೆಯ ವಯೋಮಿತಿ :: 14 ವರ್ಷ ವಯೋಮಿತಿ ಬಾಲಕರ ವಿಭಾಗ 20.ಕೆ.ಜಿ, 25 ಕೆ.ಜಿ, 30 ಕೆ.ಜಿ, 40 ಕೆ.ಜಿ, 45 ಕೆ.ಜಿ, 50 ಕೆ.ಜಿ, 55 ಕೆ.ಜಿ, 60 ಕೆ.ಜಿ. ಮತ್ತು ಮೇಲ್ಪಟ್ಟು, ಬಾಲಕಿಯರ ವಿಭಾಗ 18 ಕೆ.ಜಿ, 22 ಕೆ.ಜಿ, 26 ಕೆ.ಜಿ, 30 ಕೆ.ಜಿ, 34 ಕೆ.ಜಿ, 38 ಕೆ.ಜಿ, 45 ಕೆ.ಜಿ, 46 ಕೆ.ಜಿ, 50 ಕೆ.ಜಿ ಮೇಲ್ಪಟ್ಟು, 17 ವರ್ಷ ವಯೋಮಿತಿಯ ಬಾಲಕರ ವಿಭಾಗ 35 ಕೆ.ಜಿ, 40 ಕೆ.ಜಿ, 45 ಕೆ.ಜಿ, 50 ಕೆ.ಜಿ, 54 ಕೆ.ಜಿ, 58 ಕೆ.ಜಿ, 62 ಕೆ.ಜಿ, 66 ಕೆ.ಜಿ, 70 ಕೆ.ಜಿ, 74 ಕೆ.ಜಿ, 78 ಕೆ.ಜಿ, 82 ಕೆ.ಜಿ ಮತ್ತು ಮೇಲ್ಪಟ್ಟು
ಬಾಲಕಿಯರ ವಿಭಾಗ 32 ಕೆ.ಜಿ, 36 ಕೆ.ಜಿ, 40 ಕೆ.ಜಿ, 44 ಕೆ.ಜಿ, 48 ಕೆ.ಜಿ, 52 ಕೆ.ಜಿ, 56 ಕೆ.ಜಿ, 60 ಕೆ.ಜಿ, 64 ಕೆ.ಜಿ, 68 ಕೆ.ಜಿ ಮೇಲ್ಪಟ್ಟು
Breaking News
- *ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ*
- *ಕೊಡಗು ಹಿತರಕ್ಷಣಾ ವೇದಿಕೆಯಿಂದ ಸಂಭ್ರಮದ 76ನೇ ಗಣರಾಜ್ಯೋತ್ಸವ ಆಚರಣೆ*
- *ರಾಜಾಸೀಟು ಸೊಬಗಿಗೆ ಮನಸೋತ ಉಸ್ತುವಾರಿ ಸಚಿವರು*
- *ಸಿಕ್ಕ ಸಿಕ್ಕ ವಾಹನಗಳ ಮೇಲೆ ಒಂಟಿ ಸಲಗ ದಾಳಿ*
- *ಕೊಡ್ಲಿಪೇಟೆ ನಂದಿಪುರ ಕೆರೆ ಅಭಿವೃದ್ಧಿ : ಗ್ಯಾರಂಟಿ ಯೋಜನೆಗಳ ಮೂಲಕ ಭ್ರಷ್ಟಚಾರವಿಲ್ಲದೆ ಜನರಿಗೆ ನೇರವಾಗಿ ಹಣ : ಸಚಿವ ಎನ್.ಎಸ್.ಭೋಸರಾಜು*
- *ಸಿಎನ್‌ಸಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶಾಂತಿಯುತ ಹಕ್ಕೊತ್ತಾಯ ಮಂಡನೆ*
- *ಕೊಡಗು ವಿಶ್ವವಿದ್ಯಾಲಯದಲ್ಲಿ ಕೌಶಲ್ಯಾಭಿವೃದ್ಧಿ ಡಿಪ್ಲೊಮೋ ಕೋರ್ಸ್ ಲೋಕಾರ್ಪಣೆ : ವಿದ್ಯಾರ್ಥಿಗಳು ಕೌಶಲ್ಯಾಭಿವೃದ್ಧಿಗೆ ಆದ್ಯತೆ ನೀಡಬೇಕು : ಸಚಿವ ಎನ್ ಎಸ್ ಭೋಸರಾಜು ಕರೆ*
- *ಜಿಲ್ಲಾ ಮಟ್ಟದ ಜನಸ್ಪಂದನಾ ಸಭೆ : ಸಮಸ್ಯೆಗಳ ಪರಿಹಾರಕ್ಕೆ ಸಚಿವ ಎನ್.ಎಸ್.ಭೋಸರಾಜು ಸೂಚನೆ*
- *ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಹಳೆ ವಿದ್ಯಾರ್ಥಿ ಸಂಘದಿಂದ ಗುರುವಂದನಾ ಕಾರ್ಯಕ್ರಮ*
- *ಮಡಿಕೇರಿಯಲ್ಲಿ 76 ನೇ ಗಣರಾಜ್ಯೋತ್ಸವದ ಅರ್ಥಪೂರ್ಣ ಆಚರಣೆ*