ಮಡಿಕೇರಿ ಸೆ.22 : ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭಗೊoಡಿದ್ದರೂ ಮಡಿಕೇರಿ ನಗರದ ರಸ್ತೆಗಳ ದುರಸ್ತಿ ಕಾರ್ಯಕ್ಕೆ ನಗರಸಭೆ ಯಾವುದೇ ಕಾಳಜಿ ತೋರುತ್ತಿಲ್ಲವೆಂದು ಆರೋಪಿಸಿರುವ ಕೊಡಗು ರಕ್ಷಣಾ ವೇದಿಕೆ, ಸೆ.29 ರಂದು ನಗರಸಭಾ ಕಚೇರಿಗೆ ಮುತ್ತಿಗೆ ಹಾಕಿ ರಸ್ತೆ ತಡೆ ಪ್ರತಿಭಟನೆ ನಡೆಸುವುದಾಗಿ ತಿಳಿಸಿದೆ.
ಪತ್ರಿಕಾ ಪ್ರಕಟಣೆ ನೀಡಿರುವ ಕೊರವೇ ಅಧ್ಯಕ್ಷ ಅಚ್ಚಂಡೀರ ಪವನ್ ಪೆಮ್ಮಯ್ಯ, ನಗರದ ಜನತೆಗೆ ರಸ್ತೆ ಸೇರಿದಂತೆ ಮೂಲಭೂತ ಸೌಲಭ್ಯ ನೀಡುವಲ್ಲಿ ನಗರಸಭೆ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಗರದ ಎಲ್ಲಾ ರಸ್ತೆಗಳು ಹದಗೆಟ್ಟು ಹೊಂಡ ಗುಂಡಿಗಳಾಗಿವೆ, ಪಾದಾಚಾರಿಗಳು ಹಾಗೂ ದ್ವಿಚಕ್ರ ವಾಹನ ಚಾಲಕರು ಬಿದ್ದು ಗಾಯಗೊಂಡ ಘಟನೆಗಳೂ ನಡೆದಿದೆ. ಕೆಲವು ಬಡಾವಣೆಗಳಲ್ಲಿ ವಾಹನ ಸಂಚಾರವೇ ದುಸ್ತರವಾಗಿದೆ. ದಸರಾ ಜನೋತ್ಸವದ ಸಂದರ್ಭ ನಾಲ್ಕು ಶಕ್ತಿ ದೇವತೆಗಳ ಕರಗಗಳು ನಗರ ಸಂಚಾರ ಮಾಡುತ್ತವೆ. ಆದರೆ ಯಾವುದೇ ರಸ್ತೆಗಳು ದುರಸ್ತಿ ಕಾಣದೆ ಇರುವುದರಿಂದ ಕರಗಗಳು ಹೊಂಡ ಗುಂಡಿಗಳಾದ ಅಶುಚಿತ್ವದ ರಸ್ತೆಗಳಲ್ಲೇ ಸಂಚರಿಸಬೇಕಾದ ಅನಿವಾರ್ಯತೆ ಈ ಬಾರಿ ಕೂಡ ಎದುರಾಗಿದೆ.
ದಸರಾ ಜನೋತ್ಸವದ ಸಂದರ್ಭವೂ ರಸ್ತೆಗಳ ಅಭಿವೃದ್ಧಿ ಮತ್ತು ದುರಸ್ತಿ ಬಗ್ಗೆ ಕಾಳಜಿ ತೋರದ ನಗರಸಭೆ ತೇಪೆ ಕಾರ್ಯದ ಮೂಲಕವೇ ಕಾಲ ಕಳೆಯುತ್ತಿದೆ. ಚರಂಡಿ, ತೋಡು ಮತ್ತು ಸುಲಭ್ ಶೌಚಾಲಯಗಳ ಶುಚಿತ್ವಕ್ಕೆ ಆದ್ಯತೆ ನೀಡದ ಆಡಳಿತ ವ್ಯವಸ್ಥೆ ಪ್ರವಾಸಿಗರ ಎದುರು ಮಡಿಕೇರಿ ನಗರ ತಲೆ ತಗ್ಗಿಸುವಂತೆ ಮಾಡಿದೆ. ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಲ್ಲಿ ನಗರಸಭೆ ಸಂಪೂರ್ಣವಾಗಿ ವಿಫಲವಾಗಿದೆ. ಜನರು ನಗರದ ಅಭಿವೃದ್ಧಿ ಕಾರ್ಯಗಳಿಗಾಗಿ ಕಂದಾಯದ ರೂಪದಲ್ಲಿ ಹಣ ಪಾವತಿಸುತ್ತಾರೆ. ಆದರೆ ಪಾವತಿಯಾದ ಕಂದಾಯಕ್ಕೆ ಪ್ರತಿಯಾಗಿ ನಗರ ಅಭಿವೃದ್ಧಿಯಾಗುತ್ತಿಲ್ಲ ಎಂದು ಪವನ್ ಪೆಮ್ಮಯ್ಯ ಟೀಕಿಸಿದ್ದಾರೆ.
ಮುಂದಿನ ಏಳು ದಿನಗಳೊಳಗೆ ರಸ್ತೆ ಡಾಂಬರೀಕರಣ ಕಾರ್ಯ ಆರಂಭಿಸದಿದ್ದಲ್ಲಿ ನಗರಸಭೆ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಮತ್ತು ನಗರಸಭೆಯ ಎದುರು ಮುಖ್ಯ ರಸ್ತೆ ತಡೆ ಪ್ರತಿಭಟನೆ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಆಟೋ ಚಾಲಕರ ಸಂಘ, ಲಾರಿ ಚಾಲಕರ ಸಂಘ, ಖಾಸಗಿ ಬಸ್ ಚಾಲಕರು ಹಾಗೂ ಸಿಬ್ಬಂದಿಗಳ ಸಂಘ, ಟ್ಯಾಕ್ಸಿ ಚಾಲಕರ ಸಂಘ ಸೇರಿದಂತೆ ಸಾರ್ವಜನಿಕರ ಸಹಕಾರ ಪಡೆದು ಬೃಹತ್ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.
Breaking News
- *ಪ್ರತೀ ಜಿಲ್ಲೆಯಲ್ಲೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ : ಸಿ.ಎಂ ಘೋಷಣೆ*
- *ಖೋ ಖೋ ವಿಶ್ವಕಪ್ : ರಾಜ್ಯದ ಇಬ್ಬರು ಆಟಗಾರರಿಗೆ ತಲಾ 5 ಲಕ್ಷ ರೂ. ಘೋಷಿಸಿದ ಸಿಎಂ*
- *ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನದ ಆಕರ್ಷಣೆ*
- *ರೈಲ್ವೆ ಇಲಾಖೆಯ 32,438 ಗ್ರೂಪ್-ಡಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ*
- *ಭಾಗಮಂಡಲ ಗ್ರಾ.ಪಂ ವತಿಯಿಂದ ಅಂಗನವಾಡಿಗಳಿಗೆ ಕೊಡುಗೆ*
- *ಗಣರಾಜ್ಯೋತ್ಸವದಂದು ಸಿಎನ್‌ಸಿಯಿಂದ ಶಾಂತಿಯುತ ಹಕ್ಕೊತ್ತಾಯ ಮಂಡನೆ*
- *ಪ್ರಾಣಿ ದಯಾಸಂಘದ ವಾರ್ಷಿಕ ಮಹಾಸಭೆ : ಹಲವು ವಿಚಾರ ಕುರಿತು ಚರ್ಚೆ*
- *ರಾಜಾಸೀಟು ಉದ್ಯಾನದಲ್ಲಿ ಕಣ್ಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ : ಶಾಸಕ ಡಾ.ಮಂತರ್ ಗೌಡ ಉದ್ಘಾಟನೆ*
- *ರಾಜಾಸೀಟು ಫಲಪುಷ್ಪ ಪ್ರದರ್ಶನದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರ ದೇವಾಲಯದ ಆಕರ್ಷಣೆ*
- *ಮಡಿಕೇರಿಯಲ್ಲಿ ಹಿರಿಯ ನಾಗರಿಕರಿಗೆ ಕಣ್ಣಿನ ತಪಾಸಣಾ ಶಿಬಿರ*