ಮಡಿಕೇರಿ ಸೆ.23 : ಸರ್ಕಾರದ 5 ಗ್ಯಾರಂಟಿ ಯೋಜನೆಯನ್ನು ಫಲಾನುಭವಿಗಳಿಗೆ ಸರಿಯಾದ ಕ್ರಮದಲ್ಲಿ ತಲುಪಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್. ವೀಣಾ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು.
ಕೊಡಗು ಜಿಲ್ಲೆಯಲ್ಲಿ ಸೆಪ್ಟೆಂಬರ್, 25 ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ “ಜನತಾ ದರ್ಶನ” ಕಾರ್ಯಕ್ರಮ ನಡೆಯಲಿದ್ದು, ಜನತಾ ದರ್ಶನ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಬೇಕು ಹಾಗೂ ಸಾರ್ವಜನಿಕರ ಹಾಗೂ ಫಲಾನುಭವಿಗಳ ಸಮಸ್ಯೆಯನ್ನು ಪರಿಹರಿಸಲು ಸೂಕ್ತ ಕ್ರಮಗಳನ್ನು ಜರುಗಿಸಬೇಕು. ಆದಷ್ಟು ಬೇಗ ಸ್ಥಳೀಯ ಮಟ್ಟದಲ್ಲಿ ಯಾವುದೇ ಸಮಸ್ಯೆ ಇದ್ದರೂ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಸಮಸ್ಯೆಗಳನ್ನು ಪರಿಹರಿಸಿ ಕೊಡಬೇಕೆಂದು ಅಪರ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ಅಧಿಕಾರಿಗಳಿಗೆ ಸಲಹೆ ಮಾಡಿದರು.
ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಕುರಿತಂತೆ ಫಲಾನುಭವಿಗಳಿಗೆ ಹಣ ವರ್ಗಾವಣೆ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು. ಹಾಗೂ ನಾರಿ ಶಕ್ತಿ ಯೋಜನೆ ಕುರಿತಂತೆ ಬಸ್‍ನಲ್ಲಿ ಪ್ರಯಾಣಿಸಿದ ಫಲಾನುಭವಿಗಳ ಮಾಹಿತಿ ಪಟ್ಟಿಯನ್ನು ಸಿದ್ಧಪಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಅನ್ನಭಾಗ್ಯ ಯೋಜನೆ ಕುರಿತಂತೆ ಫಲಾನುಭವಿಗಳಿಂದ ಬಂದಂತಹ ಅಹವಾಲನ್ನು ಇಲಾಖಾ ಮಟ್ಟದಲ್ಲಿ ಪರಿಹರಿಸಿಕೊಳ್ಳಬೇಕು ಎಂದರು.
ಇಲಾಖಾ ವತಿಯಿಂದ ನಡೆಯುವ ಕಾರ್ಯಕ್ರಮಗಳಿಗೆ ಆಯಾಯ ಇಲಾಖೆಯ ಅಧಿಕಾರಿಗಳು ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ಅಧಿಕಾರಿಗಳಿಗೆ ತಿಳಿಸಿದರು. ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
Breaking News
- *ಪ್ರತೀ ಜಿಲ್ಲೆಯಲ್ಲೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ : ಸಿ.ಎಂ ಘೋಷಣೆ*
- *ಖೋ ಖೋ ವಿಶ್ವಕಪ್ : ರಾಜ್ಯದ ಇಬ್ಬರು ಆಟಗಾರರಿಗೆ ತಲಾ 5 ಲಕ್ಷ ರೂ. ಘೋಷಿಸಿದ ಸಿಎಂ*
- *ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನದ ಆಕರ್ಷಣೆ*
- *ರೈಲ್ವೆ ಇಲಾಖೆಯ 32,438 ಗ್ರೂಪ್-ಡಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ*
- *ಭಾಗಮಂಡಲ ಗ್ರಾ.ಪಂ ವತಿಯಿಂದ ಅಂಗನವಾಡಿಗಳಿಗೆ ಕೊಡುಗೆ*
- *ಗಣರಾಜ್ಯೋತ್ಸವದಂದು ಸಿಎನ್‌ಸಿಯಿಂದ ಶಾಂತಿಯುತ ಹಕ್ಕೊತ್ತಾಯ ಮಂಡನೆ*
- *ಪ್ರಾಣಿ ದಯಾಸಂಘದ ವಾರ್ಷಿಕ ಮಹಾಸಭೆ : ಹಲವು ವಿಚಾರ ಕುರಿತು ಚರ್ಚೆ*
- *ರಾಜಾಸೀಟು ಉದ್ಯಾನದಲ್ಲಿ ಕಣ್ಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ : ಶಾಸಕ ಡಾ.ಮಂತರ್ ಗೌಡ ಉದ್ಘಾಟನೆ*
- *ರಾಜಾಸೀಟು ಫಲಪುಷ್ಪ ಪ್ರದರ್ಶನದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರ ದೇವಾಲಯದ ಆಕರ್ಷಣೆ*
- *ಮಡಿಕೇರಿಯಲ್ಲಿ ಹಿರಿಯ ನಾಗರಿಕರಿಗೆ ಕಣ್ಣಿನ ತಪಾಸಣಾ ಶಿಬಿರ*