ಮಡಿಕೇರಿ ಸೆ.23 : ಜಿಲ್ಲಾ ಮಟ್ಟದಲ್ಲಿ ಸಾರ್ವಜನಿಕರ ಅಹವಾಲುಗಳಿಗೆ ಸೂಕ್ತ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಪ್ರತಿ ತಿಂಗಳು ‘ಜನತಾ ದರ್ಶನ’ ಕಾರ್ಯಕ್ರಮ ಹಮ್ಮಿಕೊಂಡು ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಒದಗಿಸುವ ಸಂಬಂಧ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸೆ.25 ರಂದು ಏಕಕಾಲದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಂಬಂಧಿಸಿದ ಚುನಾಯಿತ ಪ್ರತಿನಿಧಿಗಳನ್ನು ಒಳಗೊಂಡಂತೆ ‘ಜನತಾ ದರ್ಶನ’ ಕಾರ್ಯಕ್ರಮ ಹಮ್ಮಿಕೊಳ್ಳಲು ಮುಖ್ಯಮಂತ್ರಿ ಅವರು ಸೂಚನೆ ನೀಡಿರುತ್ತಾರೆ.
ಅದರಂತೆ, ಕೊಡಗು ಜಿಲ್ಲೆಯಲ್ಲಿ ಸೆ.25 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಾಪೋಕ್ಲುವಿನ ಚೆರಿಯಪರಂಬು ಶಾದಿ ಮಹಲ್‍ನಲ್ಲಿ “ಜನತಾ ದರ್ಶನ” ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕರು ‘ಜನತಾ ದರ್ಶನ ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.









