ಮಡಿಕೇರಿ ಸೆ.23 : ಜಿಲ್ಲಾ ಜಾತ್ಯತೀತ ಜನತಾ ದಳ ಪಕ್ಷದ ಜಿಲ್ಲಾಧ್ಯಕ್ಷರಾಗಿದ್ದ ಕೆ.ಎಂ.ಗಣೇಶ್ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.
ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಮಾಜಿ ಜಿಲ್ಲಾಧ್ಯಕ್ಷ ಇಸಾಖ್ ಖಾನ್ ಹಾಗೂ ಪ್ರಮುಖರಾದ ಡೆನ್ನಿಬರೋಸ್, ಮೋಹನ್ ಮೌರ್ಯ ಜೊತೆಗೆ ಗಣೇಶ್ ಪಕ್ಷ ಸೇರ್ಪಡೆಗೊಂಡರು.
ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಸೋಲು ಅನುಭವಿಸಿದ ಬಳಿಕ ಗಣೇಶ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ ಅದು ಅಂಗೀಕಾರವಾಗಿರಲಿಲ್ಲ. ಇದೀಗ ಮಾತೃಪಕ್ಷ ಕಾಂಗ್ರೆಸ್ ಗೆ ಗಣೇಶ್ ಮರಳಿದ್ದಾರೆ.









