ಸುಂಟಿಕೊಪ್ಪ ಸೆ.24 : ಕೆದಕಲ್ ಗ್ರಾ.ಪಂ ವ್ಯಾಪ್ತಿಯ ಹೊರೂರು ಗ್ರಾಮದಲ್ಲಿ ಸಾರ್ವಜನಿಕ ಶ್ರೀಗೌರಿ ಗಣೇಶೋತ್ಸವ ಸೇವಾ ಸಮಿತಿ ವತಿಯಿಂದ ಹೊರೂರು ಮಠದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಶ್ರೀಗೌರಿ ಗಣೇಶ ಉತ್ಸವ ಮೂರ್ತಿಗಳನ್ನು ವಿಸರ್ಜಿಸಲಾಯಿತು.
ವಿಶೇಷ ಪೂಜೆ, ಮಹಾಪೂಜೆ, ಮಂಗಳಾರತಿ, ನಂತರ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು. ಸಂಜೆ ವಿದ್ಯುತ್ ದೀಪಾಲಂಕೃತ ಮಂಟಪದಲ್ಲಿ ಗೌರಿಗಣೇಶೋತ್ಸವ ಮೂರ್ತಿಗಳನ್ನು ಮೆರವಣಿಗೆ ಮಾಡಿ ತೋಟದ ಕೆರೆಯಲ್ಲಿ ವಿಸರ್ಜಿಸಲಾಯಿತು.
ಸಮಿತಿಯ ಅಧ್ಯಕ್ಷರು, ಕಾರ್ಯಕಾರಿ ಮಂಡಳಿ ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.










