ಸುಂಟಿಕೊಪ್ಪ ಸೆ.24 : ವಿಶ್ವ ಹಿಂದೂ ಪರಿಷತ್ ಮತ್ತು ಗೌರಿ ಗಣೇಶೋತ್ಸವ ಸಮಿತಿ ವತಿಯಿಂದ ಸುಂಟಿಕೊಪ್ಪದ ರಾಮಮಂದಿರದಲ್ಲಿ ನಡೆಯುತ್ತಿರುವ ಗೌರಿ ಗಣೇಶೋತ್ಸವದ ಅಂಗವಾಗಿ ಆಯೋಜಿಸಿದ್ದ ಕುಂದನ ನೃತ್ಯಾಲಯದ ವಿನುತ ಹೇಮಂತ್ ಅವರ ನೇತೃತ್ವದ ಭರತನಾಟ್ಯ ಪ್ರದರ್ಶನ ಗಮನ ಸೆಳೆಯಿತು.
ಮಂಜುನಾಥಯ್ಯ ಮೀನಾಕ್ಷಮ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮವನ್ನು ಸಮಿತಿಯ ಅಧ್ಯಕ್ಷ ವಿಘ್ನೇಶ್ ಉದ್ಘಾಟಿಸಿದರು.










