ನಾಪೋಕ್ಲು ಸೆ.25 : ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಸಂಯುಕ್ತ ಆಶ್ರಯದಲ್ಲಿ ಯುವಜನೋತ್ಸವ – 2023ರ ಅಂಗವಾಗಿ ಏರ್ಪಡಿಸಲಾಗಿದ್ದ ಅಂತರ ಪ್ರೌಢಶಾಲಾ ರಸಪ್ರಶ್ನೆ ಸ್ಪರ್ಧೆಯಲ್ಲಿ ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಮಡಿಕೇರಿಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಭಾಂಗಣದಲ್ಲಿ ನಡೆದ ಪ್ರೌಢಶಾಲಾ ವಿದ್ಯಾರ್ಥಿಗಳ ರಸಪ್ರಶ್ನೆ ಸ್ಪರ್ಧೆಯಲ್ಲಿ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಎಂ.ಹರ್ಷಿತ ಕುಶಾಲಪ್ಪ ಮತ್ತು ಪಿ.ಎ.ನಸೀರ ತಂಡ ಪ್ರಥಮ ಸ್ಥಾನಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ರಸಪ್ರಶ್ನೆ ಸ್ಪರ್ಧೆಯಲ್ಲಿ 19 ಶಾಲೆಗಳ 38 ವಿದ್ಯಾರ್ಥಿಗಳು ತಂಡ ಪಾಲ್ಗೊಂಡಿತ್ತು.
ವರದಿ : ದುಗ್ಗಳ ಸದಾನಂದ.









