ನಾಪೋಕ್ಲು ಸೆ.25 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಕೆಪಿಎಸ್ ಶಾಲೆಯಲ್ಲಿ ನಡೆದ ದೇಶಭಕ್ತಿಗೀತೆ ಗಾಯನ ಸ್ಪರ್ಧೆಯಲ್ಲಿ ನಾಪೋಕ್ಲುವಿನ ಅಂಕುರ್ ಪಬ್ಲಿಕ್ ಶಾಲೆಯ 8 ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿದ್ದಾರೆ.
ಇವರು ಸೆ.30 ರಂದು ಬೆಂಗಳೂರಿನ ಮಲ್ಲೇಶ್ವರಂ ಮಹಾರಾಣಿ ಕಾಲೇಜಿನಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಗೆ ಕೊಡಗು ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ ಎಂದು ಸಂಸ್ಥೆಯ ಕಾರ್ಯದರ್ಶಿ ಕೇಟೊಳಿರ ರತ್ನ ಚರ್ಮಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ : ದುಗ್ಗಳ ಸದಾನಂದ








