ಮಡಿಕೇರಿ ಸೆ.25 : ಕೊಡಗು ಜಿಲ್ಲಾ ಮಟ್ಟದ ಅಂತರ ಪ್ರಾಥಮಿಕ ಶಾಲಾ 14 ವಯೋಮಿತಿಯ ಬಾಲಕಿಯರ ಫುಟ್‍ಬಾಲ್ ಕ್ರೀಡಾಕೂಟದಲ್ಲಿ ಮಡಿಕೇರಿಯ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಗೆಲುವು ಸಾಧಿಸಿ ವಿಭಾಗ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಮೂರ್ನಾಡು ಶಾಲಾ ಮೈದಾನದಲ್ಲಿ ನಡೆದ ಕ್ರೀಡಾಕೂಟದಲ್ಲಿ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಬಾಲಕಿಯರು ಲಿಟಲ್ ಫ್ಲವರ್ ಶಾಲೆ ಗೋಣಿಕೊಪ್ಪ, ವಿರಾಜಪೇಟೆ ತಂಡವನ್ನು 2-0 ಗೋಲುಗಳ ಅಂತರದಿಂದ ಮಣಿಸಿ ಗೆಲುವು ಸಾಧಿಸಿತು.
ಕೆ.ಎನ್.ವಿಧಿತ ಮತ್ತು ಫಿದಾ ಫಾತಿಮಾ ತಲಾ ಒಂದು ಗೋಲು ಹೊಡೆಯುವ ಮೂಲಕ ತಂಡಕ್ಕೆ ಜಯ ತಂದು ಕೊಟ್ಟರು.
ಮುಂದೆ ಮಂಗಳೂರಿನಲ್ಲಿ ನಡೆಯುವ ವಿಭಾಗ ಮಟ್ಟದ ಕ್ರೀಡಾಕೂಟಕ್ಕೆ ಈ ತಂಡ ಆಯ್ಕೆಯಾಗಿದೆ.
ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಬಿ.ಎಲ್.ಸಂದೇಶ್ ತರಬೇತಿ ನೀಡಿದ್ದಾರೆ. ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಎಸ್.ಡಿ.ಎಂಸಿ ಅಧ್ಯಕ್ಷರು ಮತ್ತು ಸದಸ್ಯರುಗಳು ಅಭಿನಂದನೆ ಸಲ್ಲಿಸಿದ್ದಾರೆ.








