ಮಡಿಕೇರಿ ಸೆ.26 : ಭಾರತೀಯ ಜನತಾ ಪಾರ್ಟಿ ವತಿಯಿಂದ ದೀನ್ ದಯಾಳ್ ಉಪಾಧ್ಯಾಯ ಅವರ 107 ನೇ ಜನ್ಮದಿನವನ್ನು ಮೇಕೇರಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ದೀನ್ ದಯಾಳ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಲಾಯಿತು.
ಈ ಸಂದರ್ಭ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ತನ್ನ ಇಡೀ ಜೀವನವನ್ನೇ ಸಮಾಜಕ್ಕಾಗಿ ಸಮರ್ಪಿಸಿದ ಜನಸಂಘದ ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿಗಳಾಗಿದ್ದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರು ಎಲ್ಲರಿಗೂ ಮಾದರಿಯಾಗಿದ್ದರು ಎಂದರು.
ಗ್ರಾಮದಲ್ಲಿ ಭಾರತೀಯ ಜನತಾ ಪಕ್ಷವನ್ನು ಕಟ್ಟಿ ಬೆಳೆಸಿದ ಹಿರಿಯರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭ ಮಡಿಕೇರಿ ನಗರ ಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಸಿ.ಸತೀಶ್ , ಬಿಜೆಪಿ ಶಕ್ತಿಕೇಂದ್ರದ ಸಂಚಾಲಕ ಚೋಂಡಿರ ಕಿರಣ್ , ಬೂತ್ ಸಮಿತಿ ಅಧ್ಯಕ್ಷ ವಿಜು ಹರೀಶ್ , ಗ್ರಾ.ಪಂ. ಸದಸ್ಯರಾದ ಸುಶೀಲಾ ಮಧು, ಪ್ರಮುಖರಾದ ಟಿ.ಎನ್.ಉಮೇಶ್, ಜಿತಿನ್, ಗ್ರಾ.ಪಂ ಮಾಜಿ ಸದಸ್ಯರಾದ ಅನುಸೂಯ ಸೇರಿದಂತೆ ಇನ್ನಿತರ ಪ್ರಮುಖರು ಕಾರ್ಯಕ್ರಮದಲ್ಲಿ ಹಾಜರಿದ್ದರು.








