ಮಡಿಕೇರಿ ಸೆ.26 : ಕರ್ಣಂಗೇರಿ ಗ್ರಾಮದ ವಿದ್ಯಾ ಭಾರತಿ ಬಡಾವಣೆಯ ಸ್ಫೂರ್ತಿ ಯುವಕ ಸಂಘದ ವತಿಯಿಂದ 13 ನೇ ವರ್ಷದ ಗಣೇಶೋತ್ಸವ ಸಂಭ್ರಮದಿಂದ ನಡೆಯಿತು.
ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಗಣೇಶ ಮೂರ್ತಿಯ ಪ್ರತಿಷ್ಠಾಪನಾ ಸ್ಥಳಕ್ಕೆ ಆಗಮಿಸಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ಗ್ರಾಮಸ್ಥರಿಗೆ ಸಿಹಿ ವಿತರಿಸಿ ಗಣೇಶೋತ್ಸವದ ಸಂಭ್ರಮವನ್ನು ಹಂಚಿಕೊಂಡರು.
ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಕಿರಿಯರು ಹಾಗೂ ಹಿರಿಯರು ಉತ್ಸಾಹದಿಂದ ಪಾಲ್ಗೊಂಡರು. ಕೆ.ನಿಡುಗಣೆ ಗ್ರಾ.ಪಂ ಸದಸ್ಯ ಜಾನ್ಸನ್ ಪಿಂಟೋ ಹಾಗೂ ಸ್ಫೂರ್ತಿ ಯುವಕ ಸಂಘದ ಅಧ್ಯಕ್ಷ ಸುರೇಂದ್ರ ಬಹುಮಾನ ವಿತರಿಸಿದರು. ವಿದ್ಯುತ್ ಅಲಂಕೃತ ಮಂಟಪದಲ್ಲಿ ಗಣೇಶನ ಮೂರ್ತಿಯನ್ನು ಮೆರವಣಿಗೆ ಮಾಡಿ ಸ್ಥಳೀಯ ಕೆರೆಯಲ್ಲಿ ವಿಸರ್ಜಿಸಲಾಯಿತು.











