ಸುಂಟಿಕೊಪ್ಪ ಸೆ.26: ವಿಶ್ವ ಹಿಂದೂ ಪರಿಷತ್ ಮತ್ತು ಗೌರಿ ಗಣೇಶೋತ್ಸವ ಸಮಿತಿ ವತಿಯಿಂದ 59ನೇ ವರ್ಷದ ಗೌರಿ ಗಣೇಶೋತ್ಸವ ಪ್ರಯುಕ್ತ ಮಕ್ಕಳಿಗೆ ಛದ್ಮವೇಷ, ಭಕ್ತಿಗೀತೆ, ಭಾವಗೀತೆ, ಆಟೋಟ ಸ್ಪರ್ಧೆ ಹಾಗೂ ವಿವಿಧ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಮಂಜನಾಥಯ್ಯ ಮಿನಾಕ್ಷಮ ಕಲ್ಯಾಣ ಮಂಟಪದಲ್ಲಿ ನಡೆದ ಸ್ಪರ್ಧೆಯಲ್ಲಿ ಮಕ್ಕಳು ಛದ್ಮವೇಷಗಳನ್ನು ಧರಿಸಿ ಗಮನ ಸೆಳೆದರು. ಅಲ್ಲದೆ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆಗಳನ್ನು ಅನಾವರಣಗೊಳಿಸಿದರು. ಸಂಜೆ ಶ್ರೀ ರಾಮಮಂದಿರದಲ್ಲಿ ರಂಗಪೂಜೆ ನಡೆಯಿತು.
ತಾ.27 ರಂದು ಸಂಜೆ 3 ಗಂಟೆಗೆ ರಾಮಮಂದಿರದಿಂದ ಗಣೇಶ ಮೂರ್ತಿಯನ್ನ ವಿದ್ಯುತ್ ದೀಪಾಲಂಕೃತ ವಾಹನದಲ್ಲಿ ವಾದ್ಯಗೋಷ್ಠಿಯೊಂದಿಗೆ ಮುಖ್ಯ ಬೀದಿಯಲ್ಲಿ ಮೆರವಣಿಗೆ ಮೂಲಕ ತೆರಳಿ ಉಲ್ಲಾಸ್ ಮತ್ತು ಕರುಂಬಯ್ಯ ಕುಟುಂಬಸ್ಥರ ಕೆರೆಯಲ್ಲಿ ವಿಸರ್ಜಿಲಾಗುವುದು.