ಮಡಿಕೇರಿ ಸೆ.27 : ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ವತಿಯಿಂದ 2023-24 ನೇ ಸಾಲಿನಲ್ಲಿ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ಕಾನೂನು ಪದವೀಧರರಿಗೆ ನುರಿತ ವಕೀಲರಿಂದ ತರಬೇತಿ ನೀಡಲು ಮಾಸಿಕ ರೂ.5 ಸಾವಿರ ರೂ ತರಬೇತಿ ಭತ್ಯೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ದಿನಾಂಕ: 07-10-2023 ರೊಳಗಾಗಿ ಸಲ್ಲಿಸುವುದು. ಹೆಚ್ಚಿನ ಮಾಹಿತಿ ಪಡೆಯ ಬಯಸುವ ಅಭ್ಯರ್ಥಿಗಳು ಜಿಲ್ಲಾ ಅಲ್ಪಸಂಖ್ಯಾತರ ಇಲಾಖಾ ಕಚೇರಿಯನ್ನು ಸಂಪರ್ಕಿಸಲು ಸೂಚಿಸಿದೆ.
ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್ಸೈಟ್ www.dom.karnataka.gov.in ಅನ್ನು ಸಂಪರ್ಕಿಸಬಹುದು. ಕಚೇರಿ ದೂರವಾಣಿ ಸಂಖ್ಯೆ: 08272-225528/220214 ಹಾಗೂ ಇಲಾಖಾ ವೆಬ್ಸೈಟ್ www.dom.karnataka.gov.in ನಿಂದ ಅಲ್ಪಸಂಖ್ಯಾತರ ಎಲ್ಲಾ ಅರ್ಹ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಮತ್ತು ಇತರೆ ಸೌಲಭ್ಯಗಳ ಮಾಹಿತಿಯನ್ನು ಪಡೆದು ಸದುಪಯೋಗ ಪಡಿಸಿಕೊಳ್ಳುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಎಂ.ದಿವಾಕರ ತಿಳಿಸಿದ್ದಾರೆ.
Breaking News
- *ಜ.5 ರಂದು ಪತ್ರಕರ್ತರ ಕ್ರಿಕೆಟ್ ಕಲರವ : ಆಟಗಾರರ ಪಟ್ಟಿ ಬಿಡುಗಡೆ*
- *ಮಡಿಕೇರಿಯ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯಲ್ಲಿ ಸಂವಿಧಾನ ದಿನಾಚರಣೆ : ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ನೀಡಿ : ಸಿವಿಲ್ ನ್ಯಾಯಾಧೀಶೆ ಶುಭ*
- *ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ಗುರುತಿನ ಚೀಟಿ ವಿತರಣೆ : ಜನಸಾಮಾನ್ಯರಿಗೆ ಕಾನೂನು ಅರಿವು ಮತ್ತು ನೆರವು ಕಲ್ಪಿಸಿ : ನ್ಯಾಯಾಧೀಶ ಹೊಸಮನಿ ಪುಂಡಲೀಕ ಸಲಹೆ*
- *ಬಸವನಹಳ್ಳಿ ವಸತಿ ಶಾಲೆಯಲ್ಲಿ ನಾಟಕ ಶಿಬಿರ*
- *ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ*
- *ಚಿರತೆ ಸೆರೆಗೆ ಸೂಚನೆ*
- *ಕರಿಕೆ- ಭಾಗಮಂಡಲ ಹೆದ್ದಾರಿ ಕಾಮಗಾರಿಗೆ ಚಾಲನೆ : ಮೂಲಭೂತ ಸೌಲಭ್ಯ ಒದಗಿಸುವ ಭರವಸೆ ನೀಡಿದ ಶಾಸಕ ಪೊನ್ನಣ್ಣ*
- *ಮೂರ್ನಾಡಿನಲ್ಲಿ 69ನೇ ಕನ್ನಡ ರಾಜ್ಯೋತ್ಸವ ಸಂಭ್ರಮ*
- *ಪ್ರಧಾನಿಯನ್ನು ಭೇಟಿಯಾದ ಸಿಎಂ, ಡಿಸಿಎಂ : ವಿವಿಧ ಬೇಡಿಕೆಗಳ ಮನವಿ ಸಲ್ಲಿಕೆ*
- *ಅಭಿವೃದ್ದಿಯಲ್ಲಿ ರಾಜಕಾರಣ ಮಾಡಲಾರೆ : ಶಾಸಕ ಎ.ಎಸ್.ಪೊನ್ನಣ್ಣ*