ಮಡಿಕೇರಿ ಸೆ.27 : ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯ (ಡಿ.ಎಸ್.ಇ.ಆರ್.ಟಿ) ವತಿಯಿಂದ ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆಗೆ ಪೋತ್ಸಾಹ ನೀಡುವ ಸಲುವಾಗಿ ಪ್ರೌಢಶಾಲಾ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ಡಿ.17 ರಂದು ಎನ್‍ಎಮ್‍ಎಮ್‍ಎಸ್ ಪರೀಕ್ಷೆ ನಡೆಸಲಾಗುವುದು.
ಈ ಪರೀಕ್ಷೆಯನ್ನು ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆಸಲಾಗುವುದು. ಪರೀಕ್ಷಾ ನೋಂದಣಿಗೆ ನಿಗದಿ ಪಡಿಸಿದ್ದ ಸೆ.30 ರ ದಿನಾಂಕವನ್ನು ಅ.4 ರ ವರೆಗೆ ವಿಸ್ತರಿಸಲಾಗಿದೆ. ಈ ಪರೀಕ್ಷೆಗೆ ತಮ್ಮ ಶಾಲಾ ಮಕ್ಕಳನ್ನು ಆನ್‍ಲೈನ್ ಮೂಲಕ ಅ.4 ರೊಳಗಾಗಿ ನೋಂದಾಯಿಸಲು ಶಾಲಾ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಕ್ರಮ ವಹಿಸಬೇಕು ಎಂದು ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ( ಡಯಟ್ ) ಯ ಪ್ರಾಂಶುಪಾಲರೂ ಆದ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ( ಅಭಿವೃದ್ಧಿ) ಎಂ.ಚಂದ್ರಕಾಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಪರೀಕ್ಷೆ ನೋಂದಣಿಗೆ ಈಗಾಗಲೇ ಶಿಕ್ಷಣ ಇಲಾಖೆಯು ನೀಡಿರುವ ಲಿಂಕ್ ಬಳಸಿ ಹೆಚ್ಚಿನ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ನೋಂದಾಯಿಸಬೇಕು ಎಂದು ತಿಳಿಸಿದ್ದಾರೆ.
ಎನ್‍ಎಮ್‍ಎಮ್‍ಎಸ್. ಪರೀಕ್ಷೆ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನೋಡಲ್ ಅಧಿಕಾರಿಯಾದ ಡಯಟ್ ಸಂಸ್ಥೆಯ ಉಪನ್ಯಾಸಕಿ ಕೆ.ಎಸ್.ನಳಿನಾಕ್ಷಿ, (ಮೊ: 81399 56802), ತಾಲ್ಲೂಕು ನೋಡಲ್ ಅಧಿಕಾರಿಗಳಾದ ಕೆ.ಬಿ.ರಾಧಾಕೃಷ್ಣ, ಸೋಮವಾರಪೇಟೆ ತಾಲ್ಲೂಕು (ಮೊ: 98800 99601),ಎಂ.ಎಚ್.ಹರೀಶ್, ಮಡಿಕೇರಿ ತಾಲ್ಲೂಕು (ಮೊ: 99806 69032) ಮಾರ್ಗರೇಟ್, ವಿರಾಜಪೇಟೆ ತಾಲ್ಲೂಕು (ಮೊ: 9448706804) ಅವರನ್ನು ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ. ನೋಂದಣಿಯ ಲಿಂಕ್ ಇಂತಿದೆ: https://youtu.be/aK25Md6E_Qo
Breaking News
- *ಜ.5 ರಂದು ಪತ್ರಕರ್ತರ ಕ್ರಿಕೆಟ್ ಕಲರವ : ಆಟಗಾರರ ಪಟ್ಟಿ ಬಿಡುಗಡೆ*
- *ಮಡಿಕೇರಿಯ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯಲ್ಲಿ ಸಂವಿಧಾನ ದಿನಾಚರಣೆ : ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ನೀಡಿ : ಸಿವಿಲ್ ನ್ಯಾಯಾಧೀಶೆ ಶುಭ*
- *ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ಗುರುತಿನ ಚೀಟಿ ವಿತರಣೆ : ಜನಸಾಮಾನ್ಯರಿಗೆ ಕಾನೂನು ಅರಿವು ಮತ್ತು ನೆರವು ಕಲ್ಪಿಸಿ : ನ್ಯಾಯಾಧೀಶ ಹೊಸಮನಿ ಪುಂಡಲೀಕ ಸಲಹೆ*
- *ಬಸವನಹಳ್ಳಿ ವಸತಿ ಶಾಲೆಯಲ್ಲಿ ನಾಟಕ ಶಿಬಿರ*
- *ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ*
- *ಚಿರತೆ ಸೆರೆಗೆ ಸೂಚನೆ*
- *ಕರಿಕೆ- ಭಾಗಮಂಡಲ ಹೆದ್ದಾರಿ ಕಾಮಗಾರಿಗೆ ಚಾಲನೆ : ಮೂಲಭೂತ ಸೌಲಭ್ಯ ಒದಗಿಸುವ ಭರವಸೆ ನೀಡಿದ ಶಾಸಕ ಪೊನ್ನಣ್ಣ*
- *ಮೂರ್ನಾಡಿನಲ್ಲಿ 69ನೇ ಕನ್ನಡ ರಾಜ್ಯೋತ್ಸವ ಸಂಭ್ರಮ*
- *ಪ್ರಧಾನಿಯನ್ನು ಭೇಟಿಯಾದ ಸಿಎಂ, ಡಿಸಿಎಂ : ವಿವಿಧ ಬೇಡಿಕೆಗಳ ಮನವಿ ಸಲ್ಲಿಕೆ*
- *ಅಭಿವೃದ್ದಿಯಲ್ಲಿ ರಾಜಕಾರಣ ಮಾಡಲಾರೆ : ಶಾಸಕ ಎ.ಎಸ್.ಪೊನ್ನಣ್ಣ*