ಮಡಿಕೇರಿ ಸೆ.27 : ಭಾಗಮಂಡಲದ ಶ್ರೀ ಭಗಂಡೇಶ್ವರ–ತಲಕಾವೇರಿ ದೇವಾಲಯದಲ್ಲಿ ಜರುಗಲಿರುವ “ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ 2023” ರ ಜಾತ್ರಾ ಮಹೋತ್ಸವದ ಸಿದ್ಧತೆಗಳ ಬಗ್ಗೆ ಚರ್ಚಿಸಲು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ಸೆ.28 ರಂದು ಬೆಳಗ್ಗೆ 10.30 ಗಂಟೆಗೆ ಶ್ರೀ ಭಗಂಡೇಶ್ವರ ದೇವಾಲಯಕ್ಕೆ ಸೇರಿದ “ಮುಡಿ ಕಟ್ಟಡ”ದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ.
ಆದ್ದರಿಂದ “ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ – 2023” ರ ಜಾತ್ರಾ ಮಹೋತ್ಸವದ ಸಿದ್ಧತೆಗಳ ಬಗ್ಗೆ ಚರ್ಚಿಸಲು ಸಂಘ ಸಂಸ್ಥೆಗಳ ಅಧ್ಯಕ್ಷರು, ಎಲ್ಲಾ ಸಮುದಾಯಗಳ ಮುಖಂಡರು, ಊರಿನ ಹಿರಿಯರು, ನಾಡಿನ ಎಲ್ಲಾ ದೇವಾಲಯಗಳ ತಕ್ಕಮುಖ್ಯಸ್ಥರುಗಳು ಮತ್ತು ಸಾರ್ವಜನಿಕರು ಆಗಮಿಸಿ ತಮ್ಮ ಅಮೂಲ್ಯವಾದ ಸಲಹೆ ಸೂಚನೆಗಳನ್ನು ನೀಡಿ ತುಲಾ ಸಂಕ್ರಮಣ ಜಾತ್ರೆಯನ್ನು ಯಶಸ್ವಿಯಾಗಲು ಸಹಕರಿಸುವಂತೆ ದೇವಾಲಯದ ಕಾರ್ಯನಿರ್ವಾಹಣಾಧಿಕಾರಿ ಕೋರಿದ್ದಾರೆ.
Breaking News
- *ಜ.5 ರಂದು ಪತ್ರಕರ್ತರ ಕ್ರಿಕೆಟ್ ಕಲರವ : ಆಟಗಾರರ ಪಟ್ಟಿ ಬಿಡುಗಡೆ*
- *ಮಡಿಕೇರಿಯ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯಲ್ಲಿ ಸಂವಿಧಾನ ದಿನಾಚರಣೆ : ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ನೀಡಿ : ಸಿವಿಲ್ ನ್ಯಾಯಾಧೀಶೆ ಶುಭ*
- *ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ಗುರುತಿನ ಚೀಟಿ ವಿತರಣೆ : ಜನಸಾಮಾನ್ಯರಿಗೆ ಕಾನೂನು ಅರಿವು ಮತ್ತು ನೆರವು ಕಲ್ಪಿಸಿ : ನ್ಯಾಯಾಧೀಶ ಹೊಸಮನಿ ಪುಂಡಲೀಕ ಸಲಹೆ*
- *ಬಸವನಹಳ್ಳಿ ವಸತಿ ಶಾಲೆಯಲ್ಲಿ ನಾಟಕ ಶಿಬಿರ*
- *ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ*
- *ಚಿರತೆ ಸೆರೆಗೆ ಸೂಚನೆ*
- *ಕರಿಕೆ- ಭಾಗಮಂಡಲ ಹೆದ್ದಾರಿ ಕಾಮಗಾರಿಗೆ ಚಾಲನೆ : ಮೂಲಭೂತ ಸೌಲಭ್ಯ ಒದಗಿಸುವ ಭರವಸೆ ನೀಡಿದ ಶಾಸಕ ಪೊನ್ನಣ್ಣ*
- *ಮೂರ್ನಾಡಿನಲ್ಲಿ 69ನೇ ಕನ್ನಡ ರಾಜ್ಯೋತ್ಸವ ಸಂಭ್ರಮ*
- *ಪ್ರಧಾನಿಯನ್ನು ಭೇಟಿಯಾದ ಸಿಎಂ, ಡಿಸಿಎಂ : ವಿವಿಧ ಬೇಡಿಕೆಗಳ ಮನವಿ ಸಲ್ಲಿಕೆ*
- *ಅಭಿವೃದ್ದಿಯಲ್ಲಿ ರಾಜಕಾರಣ ಮಾಡಲಾರೆ : ಶಾಸಕ ಎ.ಎಸ್.ಪೊನ್ನಣ್ಣ*