ಮಡಿಕೇರಿ ಸೆ.27 : ಭಾಗಮಂಡಲ ಗ್ರಾ.ಪಂ ವ್ಯಾಪ್ತಿಯ ತಲಕಾವೇರಿ ಭಾಗದಲ್ಲಿ ಗ್ಲಾಸ್ ಬ್ರಿಡ್ಜ್ ನಿರ್ಮಿಸುವ ಯೋಜನೆಯ ಕಾಮಗಾರಿಯನ್ನು ಕೈಗೆತ್ತಿಕೊಳ್ಳದಂತೆ ಜಿಲ್ಲಾಧಿಕಾರಿ ವೆಂಕಟರಾಜ ಆದೇಶಿಸಿದ್ದಾರೆ.
ಕೊಡಗು ಏಕೀಕರಣ ರಂಗದ ಪ್ರಮುಖ ಎ.ಎ.ಪೂವಯ್ಯ ಅವರು ಯೋಜನೆಗೆ ಆಕ್ಷೇಪ ವ್ಯಕ್ತಪಡಿಸಿರುವ ಹಿನ್ನೆಲೆ ಜಿಲ್ಲಾಧಿಕಾರಿಗಳು ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಪತ್ರ ಬರೆದು ಕಾಮಗಾರಿ ನಡೆಸದಂತೆ ಸೂಚಿಸಿದ್ದಾರೆ.
ಅಲ್ಲದೆ ಯೋಜನೆಗೆ ಸಂಬಂಧಿಸಿದಂತೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.










