ಮಡಿಕೇರಿ ಸೆ.27 : ಕಾಡಾನೆ ದಾಳಿಯಿಂದ ವೃದ್ಧರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಡಂಗ ಮರೂರು ಭದ್ರಕಾಳಿ ದೇವಾಲಯದ ಬಳಿ ನಡೆದಿದೆ. ಅಮ್ಮಂಡ ಸುಬ್ರಮಣಿ (75) ಎಂಬುವವರೆ ಕಾಡಾನೆ ದಾಳಿಗೆ ಸಿಲುಕಿ ಗಾಯಗೊಂಡಿರುವ ವ್ಯಕ್ತಿಯಾಗಿದ್ದು, ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗ್ಗೆ ಹಾಲು ತರಲು ಅಂಗಡಿಗೆ ತೆರಳುತ್ತಿದ್ದ ಸಂದರ್ಭ ಕಾಡಾನೆ ದಾಳಿ ನಡೆಸಿದೆ. ವಿರಾಜಪೇಟೆ ಹೊರವಲಯದ ಕಡಂಗ ಮರೂರು ಪ್ರತ್ಯಕ್ಷವಾಗಿರುವ ಕಾಡಾನೆಗಳನ್ನು ಕಾಡಿಗಟ್ಟಲು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.









